Friday, September 20, 2024

ಪ್ರಾಯೋಗಿಕ ಆವೃತ್ತಿ

ವೈದ್ಯಕೀಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ

ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮಿಮ್ಸ್ ನಿರ್ದೇಶಕ ಡಾ.ಹರೀಶ್ ಹೇಳಿದರು.


ಮಂಡ್ಯ ನಗರದಲ್ಲಿರುವ ಪಿಇಟಿ ಕ್ರೀಡಾ ಸಮುಚ್ಛಯದಲ್ಲಿರುವ ಬಾಸ್ಕೆಟ್‌ಬಾಲ್ ಕ್ರೀಡಾಂಗಣದಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಮಿಮ್ಸ್ ಸಹಯೋಗದಲ್ಲಿ ನಡೆದ 2 ದಿನಗಳ ಮೈಸೂರು ವಲಯ ಬಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಎಲ್ಲಾ ವಿದ್ಯಾರ್ಥಿಗಳಿಗೂ ಪಠ್ಯದ ಜೊತೆ ಕ್ರೀಡೆಯೂ ಅತ್ಯವಶ್ಯಕ. ಸಮತೋಲನ ವ್ಯಕ್ತಿತ್ವ ರೂಪುಗೊಳ್ಳಲು ಕ್ರೀಡೆ ತುಂಬಾ ಪರಿಣಾಮಕಾರಿ ಎಂದು ನುಡಿದರು.

ಇಂದಿನ ದಿನಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕೀಡೆಗಳಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ‌. ಕ್ರೀಡಾ ಮನೋಭಾವದಿಂದ ಎಲ್ಲವನ್ನೂ ಸ್ವೀಕರಿಸುವ ಗುಣ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಿಮ್ಸ್ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಎಸ್.ಎಂ. ಸುರೇಶ್ ಅವರು ಮಾತನಾಡಿ, 2 ದಿನಗಳ ಕಾಲ ನಡೆದ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಮಂಗಳೂರು, ಹಾಸನ, ಮೈಸೂರು, ಉಜಿರೆ, ಮಂಡ್ಯ ಮಿಮ್ಸ್ ಸೇರಿದಂತೆ 8 ತಂಡಗಳು ಪಾಲ್ಗೊಂಡಿದ್ದವು ಎಂದು ತಿಳಿಸಿದರು.

ಮೈಸೂರು ತಂಡ ಪ್ರಥಮಸ್ಥಾನ, ಫಾದರ್‌ಮುಲ್ಲರ್ ಮೆಡಿಕಲ್ ಕಾಲೇಜು ಮಂಗಳೂರು ತಂಡ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಅಂತರವಲಯ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿವೆ ಎಂದು ತಿಳಿಸಿದರು.

ವಿಜೇತ ತಂಡಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಿಮ್ಸ್ ಪ್ರಾಂಶುಪಾಲ ಡಾ.ಪಿ.ಎಸ್.ತಮ್ಮಣ್ಣ, ವೈದ್ಯಕೀಯ ಸೆನೆಟ್ ಸದಸ್ಯ ಡಾ.ಶ್ರೀಧರ್, ಶಿವಮೊಗ್ಗ ಕಾಲೇಜಿನ ಡಾ.ರಮೇಶ್‌ನಾಯಕ್, ಡಾ.ಚಂದ್ರಶೇಖರ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!