Thursday, November 19, 2026

ಪ್ರಾಯೋಗಿಕ ಆವೃತ್ತಿ

ನುಡಿಜಾತ್ರೆ | ಕೃಷಿ ಇಲಾಖೆಯಿಂದ ಸಿರಿಧಾನ್ಯ ನಡಿಗೆಗೆ ಚಾಲನೆ

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಮಂಡ್ಯ ನಗರದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಉದ್ಘಾಟಿಸಿದರು.

ಸಿರಿ ಧನ್ಯ ಅತ್ಯಂತ ಆರೋಗ್ಯಯುತ ಆಹಾರವಾಗಿದ್ದು ರಾಜ್ಯ ಸರ್ಕಾರ ಸಿರಧನ್ಯ ಬೆಳೆಗೆ ವಿಶೇಷ ಪ್ರೋತ್ಸಾಹ ಧನ ನೀಡುತ್ತಿದೆ ಎಂದರು.

ಬೆಂಗಳೂರಿನಲ್ಲಿ ಮುಂದಿನ ತಿಂಗಳು ಸಿರಿಧಾನ್ಯ ಸಾವಯವ ಅಂತರಾಷ್ಟ್ರೀಯ ಮೇಳ ಆಯೋಜಿಸಿದ್ದು ಎಲ್ಲರೂ ಪಾಲ್ಗೊಳುವಂತೆ ಸಚಿವರು ಕರೆ ನೀಡಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಂಟಿ ಕೃಷಿ ನಿರ್ದೇಶಕರಾದ ಅಶೋಕ್ , ಯುವ ಮುಖಂಡರು ಹಾಗೂ ಕಲಾವಿದರಾದ ಸಚ್ಚಿನ್ ಚಲುವರಾಯಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈ ಸಿರಿಧಾನ್ಯ ನಡಿಗೆ ವಿಶೇಷ ಮೆರಗು ತಂದಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ