Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಜ್ಯಪಾಲರನ್ನು ಭೇಟಿ ಮಾಡಿದ ಸಚಿವ ಚಲುವರಾಯಸ್ವಾಮಿ ನೇತೃತ್ವದ ಮಂಡ್ಯ ಶಾಸಕರ ನಿಯೋಗ

ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ಬರೆದಿದ್ದಾರೆನ್ನಲಾದ ಪತ್ರಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆಯನ್ನು ಮನವರಿಗೆ ಮಾಡಿ ಕೊಡುವುದಕ್ಕಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರ ನಿಯೋಗವು ಬುಧವಾರ ಮಧ್ಯಾಹ್ನ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.

ಈ ನಿಯೋಗದಲ್ಲಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡ್ಡಿಸಿದ್ದೇಗೌಡ, ರವಿಕುಮಾರ್, ಕೆ.ಎಂ ಉದಯ್ ಗೌಡ, ದಿನೇಶ್ ಗೂಳಿಗೌಡ, ಮಧು ಮಾದೇಗೌಡ ಹಾಗೂ ಮಾಜಿ ಶಾಸಕರಾದ ಹೊನ್ನಲಗೆರೆ ರಾಮಕೃಷ್ಣ, ಕೆ.ಬಿ ಚಂದ್ರಶೇಖರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!