Friday, September 20, 2024

ಪ್ರಾಯೋಗಿಕ ಆವೃತ್ತಿ

ವಿವಿಧ ಕಲಾತಂಡಗಳ ಮಧ್ಯೆ ಸಂಭ್ರಮದಿಂದ ನಡೆದ ಸಾಮೂಹಿಕ ಗಣೇಶೋತ್ಸವ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶ ಮೂರ್ತಿಯ ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳ ನಡುವೆ ಸಂಭ್ರಮದಿಂದ ಸಾಗಿತು.

ಇಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕಲಾತಂಡಗಳಾದ ಚಂಡೆ- ಮದ್ದಳೆ, ಡೊಳ್ಳು ಕುಣಿತ, ಕಂಸಾಳೆ, ಗಾರುಡಿ ಗೊಂಬೆ, ನಾದಸ್ವರ ಮೊದಲಾದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದವು.

ನಗರದಲ್ಲಿ ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಒಂದೆಡೆ ಸೇರಿಸಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡುವ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕರೆಗೆ ಓಗೊಟ್ಟು ಹಲವರು ನಾವು ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ತಂದು ಸಾಮೂಹಿಕವಾಗಿ ವಿಸರ್ಜನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಚಂದಗಾಲು ಶಿವಣ್ಣ,ಮಂಡ್ಯ ನಗರದಲ್ಲಿ ಪ್ರತಿಷ್ಠಾಪಿಸಿದ್ದ ನೂರಾರು ಸಂಖ್ಯೆಯ ಗಣೇಶ ಮೂರ್ತಿಗಳನ್ನು ಒಂದೆಡೆ ತಂದು ಸಂಭ್ರಮದಿಂದ ಮೆರವಣಿಗೆ ಮೂಲಕ ವಿಸರ್ಜನೆ ಮಾಡುತ್ತಿರುವುದು ಸಂತೋಷದ ಸಂಗತಿ.

ಗಣೇಶ ಮೂರ್ತಿಗಳನ್ನು ಮೆರವಣಿಗೆಯ ಮೂಲಕ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಪ್ರಾರಂಭವಾಗಿ ಆರ್ ಪಿ. ರಸ್ತೆ, 100 ಅಡಿ ರಸ್ತೆ, ವಿವಿ ರಸ್ತೆ, ಕಾಳಿಕಾಂಬ ದೇವಸ್ಥಾನ, ಪೇಟೆ ಬೀದಿಯ ಮೂಲಕ ಕೋಣನಹಳ್ಳಿ ಕೆರೆಯಲ್ಲಿ ವಿಸರ್ಜಿಸಲಾಗುವುದು ಎಂದರು.

ಮೆರವಣಿಗೆಯಲ್ಲಿ ಹಲವು ಕಲಾ ತಂಡಗಳು ಭಾಗವಹಿಸಿದ್ದು ಮಂಡ್ಯ ಜನತೆಗೆ ಮಿನಿ ದಸರಾ ಉತ್ಸವದಂತೆ ಕಾಣಿಸಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ. ಉಮೇಶ್, ನಗರ ಅಧ್ಯಕ್ಷ ವಿವೇಕ್,ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ, ಹೊಸಹಳ್ಳಿ ನಾಗೇಶ್, ಪ.ನಾ.ಸುರೇಶ್,ಚಾಮರಾಜು, ಮರ್ಜಿನಿ ರಮೇಶ್, ಎಂ. ಬಿ. ರಮೇಶ್, ಹರ್ಷ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮೆರವಣಿಗೆಯಲ್ಲಿದ್ದರು. ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!