Wednesday, November 18, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಸುವರ್ಣ ಗಾಣಿಗ ಮಹಾಸಭಾ ಸಂಘಟನೆಯ ಸಭೆ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದ ಶ್ರೀ ಲಕ್ಷ್ಮೀದೇವಿ  ದೇವ ದೇವಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ ಸಂಘಟನೆಯ ತಾಲ್ಲೂಕು ಪದಾಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.
ಮಹಾಸಭಾ ರಾಜ್ಯಾಧ್ಯಕ್ಷ ಆನಂದ್ ಸಭೆಯನ್ನುಉದ್ಘಾಟನೆ ಮಾಡಿ ಮಾತನಾಡಿ, ರಾಜ್ಯದಲ್ಲಿ ಸುಮಾರು 50ರಿಂದ  60ಲಕ್ಷ ಗಾಣಿಗ ಸಮುದಾಯದ ಜನಸಂಖ್ಯೆ ಇದೆ.  ಕರ್ನಾಟಕದ ರಾಜ್ಯದಲ್ಲಿರುವ ನಮ್ಮ ಗಾಣಿಗ ಸಮುದಾಯದ ಅಭಿವೃದ್ದಿಯ ಹಿತದೃಷ್ಟಿಯಿಂದ ಈ ಹಿಂದಿನ ಬಿಜೆಪಿ ಸರ್ಕಾರವು ನಮ್ಮ ಸಮುದಾಯಕ್ಕೆ ಪ್ರತ್ಯೇಕವಾಗಿ ಕರ್ನಾಟಕ ರಾಜ್ಯ  ಗಾಣಿಗರ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಿದೆ. ಆದರೆ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿಲ್ಲ. ಹಾಗಾಗಿ ₹100 ಕೋಟಿ ಅನುದಾನ ನೀಡಬೇಕೆಂದು ಒತ್ತಾಯಿಸಿದರು.
ತೀರ ಹಿಂದುಳಿದಿರುವ  ನಮ್ಮ ಗಾಣಿಗ  ಸಮುದಾಯದ ಅಭಿವೃದ್ಧಿಗೆ ಅವಕಾಶ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ನಮ್ಮ ಸಮುದಾಯದ  ಸಂಘಟನೆಗಳನ್ನು ಒಗ್ಗೂಡಿಸಿ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಮೂಲಕ ನಮ್ಮ‌ ಹಕ್ಕನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಅವಕಾಶ ಕೊಡದೇ ಕೂಡಲೇ ಸರ್ಕಾರ ಸ್ಪಂದಿಸಬೇಕೆಂದರು.
ಮಹಾಸಭಾದ  ರಾಜ್ಯ ಕಾರ್ಯದರ್ಶಿ ವಿನಯ್ ಕುಮಾರ್, ರಾಜ್ಯ ಖಜಾಂಚಿ ವೆಂಕಟೇಶ್, ಮಹಿಳಾ ಘಟಕದ ಅಧ್ಯಕ್ಷೆ ಪ್ರಮೀಳಾಮೂರ್ತಿ, ರಾಜ್ಯ ಮಹಿಳಾ ಕಾರ್ಯದರ್ಶಿ ಸುಂದರಮ್ಮ, ಮಂಡ್ಯ ಜಿಲ್ಲಾಧ್ಯಕ್ಷ ಬೆಳಗೊಳ ಕುಮಾರ್,  ಬಿ.ಕೆ.ನರೇಂದ್ರಕುಮಾರ್,  ತಾಲ್ಲೂಕು ಗಾಣಿಗರ ಸಂಘದ ಉಪಾಧ್ಯಕ್ಷ ಆಟೋ ವಾಸುದೇವ್, ಗ್ರಾ.ಪಂ.ಸದಸ್ಯರಾದ ಪುಷ್ಪಲತಾ ಗಿರೀಶ್,  ಆರ್.ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ