Friday, June 21, 2024

ಪ್ರಾಯೋಗಿಕ ಆವೃತ್ತಿ

ಮೇಲುಕೋಟೆ| ನಾಳೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಸ್ಟಾರ್ ಚಂದ್ರು ಪ್ರಚಾರ

ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಏ.14ರಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾರಥ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ  ಸಿ.ಡಿ.ಗಂಗಾಧರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತಸಂಘ ಮತ್ತು ಸರ್ವೋದಯ ಕರ್ನಾಟಕ ಪಕ್ಷ ಬೆಂಬಲಿತ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಜೊತೆಗೂಡಿ ಪಂಚಾಯತಿ ವ್ಯಾಪ್ತಿಯಲ್ಲಿ ಮತ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಹಕರಿಸಬೇಕೆಂದು ಕೋರಿದರು.

ನಾಳೆ ಬೆಳಗ್ಗೆ 07.30 ಗಂಟೆಗೆ  ಹೆಚ್.ಮಲ್ಲೀಗೆರೆ ಗ್ರಾಮ ಪಂಚಾಯಿತಿಯಿಂದ ಪ್ರಚಾರ ಆರಂಭವಾಗಲಿದ್ದು, ನಂತರ  ಹೊಳಲು, ಮಲ್ಲನಾಯಕನ ಕಟ್ಟೆ, ಚಂದಗಾಲು, ಹುಳ್ಳೇನಹಳ್ಳಿ, ಶಿವಳ್ಳಿ,  ಮುದಗಂದೂರು,  ದುದ್ದ, ಬೇವುಕಲ್ಲು , ಜಿ.ಮಲ್ಲಿಗೆರೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರಚಾರ ನಡೆಸಿ ಮಧ್ಯಾಹ್ನ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು ಎಂದರು.

ಮಧ್ಯಾಹ್ನದ ನಂತರ ಬಳಘಟ್ಟ ಗ್ರಾಮ ಪಂಚಾಯಿತಿ, ಜಕ್ಕನಹಳ್ಳಿ, ಮಾಣಿಕ್ಕನಹಳ್ಳಿ, ಹಳೇಬೀಡು,  ಸುಂಕತಣ್ಣೂರು, ಲಕ್ಷಿಸಾಗರ, ಟಿ.ಎಸ್ ಛತ್ರ, ಹಿರೇಮರಳ್ಳಿ, ಚಿಕ್ಕಾಡೆ, ಕನಗನಮರಡಿ,  ದೊಡ್ಡಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಪ್ರಚಾರ ನಡೆಯಲಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪಾಂಡವಪುರ ತಾಲ್ಲೂಕು ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ದಯಾನಂದ್ ತಿಳಿಸಿದರು.

ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ತ್ಯಾಗರಾಜು, ಮುಖಂಡರಾದ ಸಿ.ಕೆ.ನಾಗರಾಜು ಹಾಗೂ ವಿಜಯ್ ಕುಮಾರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!