Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮೇಲುಕೋಟೆ ವೈರಮುಡಿಗೆ ವಜ್ರಾಭರಣಗಳ ರವಾನೆ

ಮಂಡ್ಯ ನಗರದ ಜಿಲ್ಲಾ ಖಜಾನೆಯಲ್ಲಿದ್ದ ಇಡಲಾಗಿದ್ದ ವಜ್ರ ಖಚಿತ ವೈರಮುಡಿ ಮತ್ತು ರಾಜಮುಡಿಯನ್ನು  ಇಂದು ಬೆಳಿಗ್ಗೆ ಹೊರ ತೆಗೆದು ವಿಶೇಷ ಪೂಜೆ ಸಲ್ಲಿಸಿ ಮೇಲುಕೋಟೆಗೆ ರವಾನಿಸಲಾಯಿತು.

ವಿಶ್ವ ವಿಖ್ಯಾತ ವೈರಮುಡಿ ಉತ್ಸವವು ಇಂದು ರಾತ್ರಿ ನಡೆಯಲಿರುವ ಹಿನ್ನೆಲೆಯಲ್ಲಿ ವಜ್ರ ಖಚಿತ ವೈರಮುಡಿ ಹಾಗೂ ರಾಜಮುಡಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಗೆ ಗುರುವಾರ ಕೊಂಡೊಯ್ಯಲಾಯಿತು.

ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪೊಲೀಸ್ ಬಿಗಿ ಭದ್ರತೆಯಲ್ಲಿ ಮೈಸೂರಿನ ಶ್ರೀಬ್ರಹ್ಮತಂತ್ರ ಸ್ವತಂತ್ರ ಪರಕಾಲಸ್ವಾಮಿ ಮಠದ ವಾಹನ ವೈರಮುಡಿ, ರಾಜಮುಡಿ ಮತ್ತು ವಜ್ರಾಭರಣಗಳನ್ನು ಹೊತ್ತು ಸಾಗಿತು.

ಮಂಡ್ಯ ನಗರದ ಶ್ರೀ ಲಕ್ಷ್ಮಿ ಜನಾರ್ಧನ ಸ್ವಾಮಿ ದೇವಾಲಯದಲ್ಲಿ ವೈರಮುಡಿ ಮತ್ತು ರಾಜಮುಡಿಗೆ ಮೊದಲ ಪೂಜೆ ಸಮರ್ಪಿಸಲಾಯಿತು, ಸಂಪ್ರದಾಯದಂತೆ ಮೇಲುಕೋಟೆಯತ್ತ ಹೊರಟ ವಜ್ರ ಖಚಿತ ವೈರಮುಡಿಗೆ ಮಾರ್ಗದುದ್ದಕ್ಕೂ ಹಳ್ಳಿ ಹಳ್ಳಿಗಳಲ್ಲಿ ಜನತೆ ಪೂಜೆ ಸಲ್ಲಿಸಿ, ಪಾನಕ ವಿತರಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ