ಮಧ್ಯವರ್ತಿಗಳ ಜೊತೆ ಅಧಿಕಾರಿಗಳು ಶಾಮೀಲಾಗಿ ರಾಗಿ ಖರೀದಿ ಮಾಡದೆ ಮೋಸ ಮಾಡುತ್ತಿದ್ದಾರೆಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದರು.
ಮದ್ದೂರು ಪಟ್ಟಣದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಮದ್ದೂರು ತಾಲ್ಲೂಕಿನಲ್ಲಿ ರಾಗಿ ಖರೀದಿ ಮಾಡದೇ ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ಕಿಡಿ ಕಾರಿದರು.
ವಕೀಲರ ಸಂಘದ ಅಧ್ಯಕ್ಷ ಸತ್ಯ ಮಾತನಾಡಿ, ಬೆಳಿಗ್ಗೆಯಿಂದ ನೂರಾರು ರೈತರು ಚಾಮನಹಳ್ಳಿ ಗೋದಾಮು ಬಳಿ ಸಾಲು ಗಟ್ಟಿ ಪರ್ಮಿಟ್ ಪಡೆಯಲು ನಿಂತಿದ್ದಾರೆ.
ಅದರೆ ಅಧಿಕಾರಿಗಳು ನೆಟ್ವರ್ಕ್ ತೊಂದರೆ ಇದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ ಅಧಿಕಾರಿಗಳು ಮಧ್ಯವರ್ತಿಗಳ ಜೊತೆ ಶಾಮೀಲಾಗಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಯೋಗಾನಂದ, ಸುನಿಲ್ ಸೇರಿದಂತೆ ಕೊಪ್ಪ ಹಾಗೂ ಆತಗೂರು ಹೋಬಳಿಯ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.