ಮಂಡ್ಯ ವೈದ್ಯಕೀಯ ಕಾಲೇಜು (ಮಿಮ್ಸ್)ವಿನಲ್ಲಿ ಮೊದಲ ವರ್ಷದ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ವಸತಿ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕಳೆದ ರಾತ್ರಿ ನಡೆದಿದೆ.
ಕೊಪ್ಪಳ ಮೂಲದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಭರತ್ ಎತ್ತಿನಮನಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ವಸತಿ ನಿಲಯದ ಕೊಠಡಿಯಲ್ಲಿ ಈತನೊಂದಿಗೆ ಕೋಲಾರದ ಓರ್ವ ಹಾಗೂ ಬೆಂಗಳೂರಿನ ಓರ್ವ ವಿದ್ಯಾರ್ಥಿಗಳು ನೆಲೆಸಿದ್ದರು. ಆದರೆ ನಿನ್ನೆ ರಜೆ ದಿನವಾದ್ದರಿಂದ ಅವರು ಊರಿಗೆ ತೆರಳಿದ್ದರು. ಅಂದು ರಾತ್ರಿ ರಾತ್ರಿ 12 ಗಂಟೆವರೆಗೆ ಹಾಸ್ಟೆಲ್ನ ಸಹಪಾಠಿಗಳೊಂದಿಗೆ ಮಾತನಾಡಿದ ನಂತರ ತನ್ನ ಕೊಠಡಿಗೆ ಹಿಂತಿರುಗಿ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಮವಾರ ಬೆಳಗ್ಗೆ ಸಹಪಾರಿಗಳು ಆತನ ಕೊಠಡಿಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ.
ಈತ ಮೊದಲ ವರ್ಷದ ಪರೀಕ್ಷೆಯಲ್ಲಿ 3 ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದ. ಓದಿನ ಕಡೆ ಗಮನವನ್ನು ಕೇಂದ್ರಿಕರಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.
ಮಂಡ್ಯ ಪೂರ್ವ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.




