Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ವೈದ್ಯಾಧಿಕಾರಿಗಳಿಗೆ ಕುಷ್ಠರೋಗದ ಬಗ್ಗೆ ಪುನರ್ ಮನನ ತರಬೇತಿ

ರಾಷ್ಟ್ರೀಯ ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮದಡಿ 2023-2024 ನೆ ಸಾಲಿನಲ್ಲಿ ವೈದ್ಯಾಧಿಕಾರಿಗಳಿಗೆ ಎರಡು ದಿನಗಳ ಕುಷ್ಠರೋಗದ ಪುನರ್ ಮನನ ತರಬೇತಿ ಕಾರ್ಯಾಗಾರವು ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ ಮೋಹನ್ ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕುಷ್ಠ ರೋಗಿಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದು ಹಾಗೂ ಅದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಕುಷ್ಠರೋಗದ ಬಗ್ಗೆ ಮಿಮ್ಸ್ ಚರ್ಮರೋಗ ವಿಭಾಗದ ಪ್ರಾಧ್ಯಾಪಕ ಡಾ.ಮುಕುಂದ್ ಹಾಗೂ ಡಾ.ಅಂಕಿತ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್,  ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಮತ್ತು ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಯ ವೈದ್ಯಾದಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!