Monday, October 2, 2023

ಪ್ರಾಯೋಗಿಕ ಆವೃತ್ತಿ

ನಿಮಿಷಾಂಭ ದರ್ಶನ ಪಡೆದ ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್

ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀ ನಿಮಿಷಾಂಬಾ ದೇವಸ್ಥಾನಕ್ಕೆ ಕೇಂದ್ರ
ಇಂಧನ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಖಾತೆ ಸಚಿವ ಕ್ರಿಶನ್ ಪಾಲ್ ಗುರ್ಜರ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮವನ್ನು ಇಂದಿನಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಶ್ರೀ ನಿಮಿಷಾಂಭ ದೇವಿಯ ಆಶೀರ್ವಾದ ಪಡೆದು ಪ್ರಾರಂಭಿಸುತ್ತಿದ್ದೇವೆಂದು ತಿಳಿಸಿದರು.

ಇದೇ ವೇಳೆ ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಮಾತನಾಡಿ, ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ರೈತರಿಗೆ ಪಿ.ಎಂ.ಕಿಸಾನ್ ಯೋಜನೆ, ಸಾರ್ವಜನಿಕರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್, ಕುಡಿಯುವ ನೀರು ಒದಗಿಸಲು ಜಲ್ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಯೋಜನೆಗಳು ಸಮರ್ಪಕವಾಗಿ ತಲುಪಿದಿಯೋ ಇಲ್ಲವೋ ಎಂಬುದರ ಕುರಿತು ಸಂವಾದ ಮಾಡಲು ಭಾರತ ಸರ್ಕಾರದ ಇಂಧನ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗೆ ನೇಮಕ ಮಾಡಲಾಗಿದೆ ಎಂದರು.

ಕೇಂದ್ರ ಸಚಿವರು ಪ್ರತಿ ತಿಂಗಳು 3 ದಿನ ಒಂದೊಂದು ತಾಲ್ಲೂಕಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಫಲಾನುಭವಿಗಳೊಂದಿಗೆ ಸಂವಾದ ಮಾಡಿ ಯೋಜನೆಗಳ ಬಗ್ಗೆ ವಾಸ್ತವ ಸ್ಥಿತಿ ತಿಳಿಯಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ.ನಾರಾಯಣಗೌಡ, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!