Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸಚಿವ ಸಿ.ಎನ್. ಅಶ್ವತ್ ನಾರಾಯಣ್ ಬಂಧನಕ್ಕೆ ಕುರುಬರ ಸಂಘ ಆಗ್ರಹ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ ನಾರಾಯಣ್ ಅವರನ್ನು ಕೂಡಲೇ ಬಂಧಿಸಬೇಕೆಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದ ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಇತ್ತಿಚೇಗೆ ನಡೆದ ಸಭೆಯೊಂದರಲ್ಲಿ ಡಾ.ಸಿ.ಎನ್. ಆಶ್ವಥ್ ನಾರಾಯಣ ಅವರು ಟಿಪ್ಪು ಸುಲ್ತಾನನ್ನು ಉರಿಗೌಡ ಹಾಗೂ ನಂಜೇಗೌಡರು ಮೇಲಕ್ಕೆ ಕಳಿಸಿದಂತೆ ಸಿದ್ದರಾಮಯ್ಯನವರನ್ನು ಅದೇ ರೀತಿ ಹೊಡೆದು ಮೇಲಕ್ಕೆ ಕಳುಹಿಸಿ ಎಂದು ಭಾಷಣ ಮಾಡಿರುವುದು ತೀವ್ರ ಖಂಡನೀಯ. ಆದ್ದರಿಂದ ಈ ಕೂಡಲೇ ಸಚಿವ ಸಿ.ಎನ್. ಅಶ್ವಥ್ ನಾರಾಯಣರನ್ನು ಬಂಧಿಸಬೇಕು. ಇಲ್ಲದಿದ್ದರೆ, ಇದೇ ಫೆ.17 ರಂದು ಮಂಡ್ಯ ನಗರದ ಡಿ.ಸಿ.ಕಚೇರಿ ಬಳಿ ಇರುವ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಶ್ವತ್ ನಾರಾಯಣ್ ಪ್ರಚೋದನಕಾರಿ ಭಾ‍‍‍ಷಣ ಮಾಡುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಬಿಜೆಪಿ ಸರ್ಕಾರದಲ್ಲಿ ಇಂತಹ ನೀಚರು ಸಚಿವರಾಗಿರುವುದು ಅವರ ಸಂಸ್ಕೃತಿಯನ್ನು ತೋರಿಸುತ್ತಿದೆ. ಧರ್ಮ ಧರ್ಮಗಳ ನಡುವೆ ವಿಷಬೀಜ ಭಿತ್ತುತ್ತಿರುವ ಇಂತಹ ನಾಲಾಯಕ್ ಸಚಿವರ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಂಡ್ಯ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಜೆ.ಶಶಿಧರ್, ಉಪಾಧ್ಯಕ್ಷ ಶ್ರೀನಿವಾಸ್, ವೆಂಕಟೇಶ್, ನಾಗರಾಜು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ