Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಆಗಸ್ಟ್ 13 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ‌.

ಆಗಸ್ಟ್ 13 ರಂದು ಬೆಳಿಗ್ಗೆ 9.30 ಗಂಟೆಗೆ ಮಂಡ್ಯ ಪಿ ಡಬ್ಲ್ಯೂ ಡಿ ಕಚೇರಿ ಆವರಣದಲ್ಲಿ ನಡೆಯಲಿರುವ ಗುತ್ತಿಗೆದಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಮಂಡ್ಯ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಏರ್ಪಡಿಸಲಾಗಿರುವ ತೆರೆದ ಸಭಾಂಗಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆಯುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆ ಡಿ ಪಿ) ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5 ಗಂಟೆಗೆ ಮಂಡ್ಯ – ಮದ್ದೂರು – ಚನ್ನಪಟ್ಟಣ – ರಾಮನಗರ – ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ