Friday, November 20, 2026

ಪ್ರಾಯೋಗಿಕ ಆವೃತ್ತಿ

ಬೀಡಿ ಕಾಲೋನಿ ಜಲಾವೃತ : 1.2 ಕೋಟಿ ರೂ. ಬಿಡುಗಡೆ

ಮಂಡ್ಯ ನಗರದ ಬೀಡಿ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾಗಿರುವ  2,000 ಮನೆಗಳಿಗೆ ಶಾಶ್ವತ ಪರಿಹಾರವನ್ನು ಮಾಡಲಾಗುತ್ತದೆ, ತಾತ್ಕಾಲಿಕವಾಗಿ 1.2 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಮಳೆ ನೀರು ತುಂಬಿದ ಸಂದರ್ಭದಲ್ಲಿ ಕಡಿಮೆ ಅನಾಹುತ ಆಗಿದೆ ಎಂದು ತಕ್ಷಣ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ, ಮನೆ ಹಾನಿ ಹಾಗೂ ಬೆಳೆ ಹಾನಿ ಆಗಿರುವವರಿಗೆ ತಕ್ಷಣ ಪರಿಹಾರವನ್ನು ನೀಡಬೇಕು, ಅಷ್ಟು ವರದಿಗಳನ್ನು ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಬೂದನೂರು, ವಿವೇಕಾನಂದ ಬಡಾವಣೆ ಪರಿಸ್ಥಿತಿ ಅವಲೋಕನ ಮಾಡಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡು, ಸ್ಥಳೀಯರಿಂದ ಸಮಸ್ಯೆಗಳನ್ನು ಆಲಿಸಿ, ಪ್ರವಾಹದ ನೀರು ನಿಯಂತ್ರಣ ಮಾಡಬೇಕು. ಬಡಾವಣೆಗೆ ಮಳೆ ನೀರು ಬಾರದಂತೆ ತಡೆಯಲು ಕ್ರಮ ವಹಿಸಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಚಿವ ಕೆ.ಗೋಪಾಲಯ್ಯ ಸೂಚನೆ ನೀಡಿದರು.

ಕೆರೆಯಂಗಳದ ವಿವೇಕಾನಂದ ಬಡಾವಣೆ, ಬೀಡಿ ಕಾಲೋನಿಗೆ ಭೇಟಿ ನೀಡಿ, ಮಳೆ ಹೆಚ್ಚಾಗಿ ಬರುತ್ತಿದ್ದು, ಮಳೆ ಕಡಿಮೆ ಆದ ಮೇಲೆ ಹಾನಿಯಾಗಿರುವ ಸ್ಥಳವನ್ನು ಅಧಿಕಾರಿಗಳು ಪರಿಶೀಲನೆ ಮಾಡಿ ಪರಿಹಾರ ನೀಡಬೇಕು ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ