ಪಾಂಡವಪುರ ತಾಲೂಕಿನಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದ ಸ್ಥಳಕ್ಕೆ ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಚಿವ ನಾರಾಯಣಗೌಡ ಪರ ಜೈಕಾರ ಕೂಗುತ್ತಿದ್ದಾಗ ಸ್ಥಳದಲ್ಲಿದ್ದ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಪ್ರಧಾನಿ ದೇವೇಗೌಡರಿಗೆ ಜಯವಾಗಲಿ, ಹೆಚ್.ಡಿ.ಕುಮಾರಸ್ವಾಮಿಗೆ ಜಯವಾಗಲಿ ಎಂದು ಘೋಷಣೆ ಕೂಗಿದ ಸಂದರ್ಭ ಉಂಟಾಯಿತು.
ಎರಡೂ ಪಕ್ಷದ ಕಾರ್ಯಕರ್ತರು ತಮ್ಮ ಪಕ್ಷದ ಶಾಲನ್ನು ಹಾರಾಡಿಸಿ, ಜೈಕಾರ ಕೂಗಿದರು. ನಂತರ ಸಚಿವ ನಾರಾಯಣಗೌಡ ಬೇರೊಂದು ಸ್ಥಳಕ್ಕೆ ತೆರಳಿದರು