ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜುಲೈ 09 ರಂದು ಮಂಡ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ ಕೈಗೊಳ್ಳಲಿದ್ದಾರೆ.
ಜುಲೈ 09 ರಂದು ಬೆಳಿಗ್ಗೆ 9 ಗಂಟೆಗೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಅಬಲವಾಡಿ ದೇವಸ್ಥಾನಕ್ಕೆ ಭೇಟಿ ನೀಡುವರು. ಬೆಳಿಗ್ಗೆ 10 ಗಂಟೆಗೆ ನೂತನ ಹೊನ್ನಸಿರಿ ವಿಥಲ್ ಎಲೆಕ್ಟ್ರಿಕಲ್ ಸ್ಕೇಟರ್‌ಗಳ ಮಾರಾಟ ಮಳಿಗೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು ಎಂದರು.
ನಂತರ ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




