ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಡ್ಯ ತಾಲ್ಲೂಕಿನ ಕೊತ್ತತ್ತಿ ಹೋಬಳಿಯ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಗುದ್ದಲಿ ಪೂಜೆ ನೆರವೇರಿಸಿದರು.
ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಕ್ಯಾತುಂಗೆರೆ ಗ್ರಾಮ ಪರಿಮಿತಿಯಲ್ಲಿ 10ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ, ಬೇವಿನಹಳ್ಳಿ ಗ್ರಾಮದ ಪರಿಮಿತಿಯಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದರು.
ಕೊತ್ತತ್ತಿ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು.
ಗ್ರಾಮದ ಪಶು ಆಸ್ಪತ್ರೆಯಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ಜಾನುವಾರುಗಳ ವಿಶ್ರಾಂತಿ ತಂಗುದಾಣ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ತರುವಾಯ 20 ಲಕ್ಷ ರೂ.ವೆಚ್ಚದಲ್ಲಿ ಕೊತ್ತತ್ತಿ ಗ್ರಾಮ ಪರಿಮಿತಿಯ ವ್ಯಾಪ್ತಿಯ ಕಾಂಕ್ರೀಟ್ ರಸ್ತೆಗಳ ನಿರ್ಮಾಣಕ್ಕೆ ಶಾಸಕ ರವೀಂದ್ರ ಶ್ರೀಕಂಠಯ್ಯ ಚಾಲನೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ.ಈ ಹಿನ್ನೆಲೆಯಲ್ಲಿ ಗ್ರಾಮ ವ್ಯಾಪ್ತಿಯ ರಸ್ತೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಕೀಲ ಬಸವರಾಜು, ಬೇವಿನಹಳ್ಳಿ ಗ್ರಾಪಂ ಅಧ್ಯಕ್ಷ ಮಹೇಶ್, ಕೊತ್ತತ್ತಿ ಗ್ರಾಪಂ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಜಯರಾಮು, ಮುಖಂಡರಾದ ಲೋಕೇಶ್, ಸೋಮಣ್ಣ, ಮಾದೇಗೌಡ, ಅಭಿ, ಭಾಸ್ಕರ್, ಶಂಕರಲಿಂಗಣ್ಣ, ತಮ್ಮಣ್ಣ, ಸಿದ್ದೇಗೌಡ ಲೋಕೋಪಯೋಗಿ ಇಲಾಖೆ ಎಇಇ ಶಂಕರ್, ಜೆ.ಇ. ಮಂಜುನಾಥ್ ಇತರರು ಉಪಸ್ಥಿತರಿದ್ದರು.