ಶ್ರೀರಂಗಪಟ್ಟಣ ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ರಸ್ತೆ, ಅಂಬೇಡ್ಕರ್ ಭವನ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಇಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಗುದ್ದಲಿ ಪೂಜೆ ನೆರವೇರಿಸಿದರು.
ಇಂದು ಬೆಳಿಗ್ಗೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ನಗುವಿನಹಳ್ಳಿಯಲ್ಲಿ ರೂ. 5.5 ಕೋಟಿ ವೆಚ್ಚದಲ್ಲಿ ನಗುವಿನಹಳ್ಳಿಯಿಂದ ರಿಂಗ್ ರಸ್ತೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಜೊತೆಗೂಡಿ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ನಗುವಿನಹಳ್ಳಿಯ ರಾಜೀವನಗರದಲ್ಲಿ ರಸ್ತೆ ಕಾಮಗಾರಿ ಹಾಗೂ ಅಂಬೇಡ್ಕರ್ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಎಲ್ಲಾ ಕಡೆ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸೂಚನೆ ನೀಡಿದರು.
ಗ್ರಾಮಸ್ಥರು ಯಾವುದೇ ಕಾಮಗಾರಿಯಲ್ಲಿ ಲೋಪವಾದರೆ ನನ್ನ ಗಮನಕ್ಕೆ ತನ್ನಿ ಎಂದು ಹೇಳಿದರು.