Thursday, November 19, 2026

ಪ್ರಾಯೋಗಿಕ ಆವೃತ್ತಿ

ವಿವಿಧ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಡಿ.ಸಿ.ತಮ್ಮಣ್ಣ ಚಾಲನೆ


  • ₹ 3.21 ಕೋಟಿ ವೆಚ್ಚದಲ್ಲಿ ಶಾಲೆಗಳ ಅಭಿವೃದ್ದಿ 

  • 15 ಸರ್ಕಾರಿ  ಶಾಲೆಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ

ಭಾರತೀನಗರ ಸಮೀಪದ ಮಣಿಗೆರೆ ಗ್ರಾಮದಲ್ಲಿ 3.21 ಕೋಟಿ ವೆಚ್ಚದಲ್ಲಿ ಮದ್ದೂರು ತಾಲ್ಲೂಕಿನ ವಿವಿಧ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಸಿ.ತಮ್ಮಣ್ಣ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಇನ್ನೂ ಕೆಲವೇ ದಿನಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಶಾಲೆಗಳಿಗೆ ಹೋಗಿ ಕೊಠಡಿಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮಣಿಗೆರೆ ಗ್ರಾಮದಲ್ಲೇ 15 ಸರ್ಕಾರಿ ಶಾಲೆಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುತ್ತಿದ್ದೇನೆ ಎಂದರು.

ಹೂತಕೆರೆ ಪ್ರೌಢಶಾಲೆ, ತೊರೆಶೆಟ್ಟಹಳ್ಳಿ ಪ್ರೌಢಶಾಲೆ, ಬೊಪ್ಪಸಮುದ್ರ ಪ್ರೌಢಶಾಲೆ, ಕೊಕ್ಕರೆ ಬೆಳ್ಳೂರು ಪ್ರೌಢಶಾಲೆ, ಮಡೇನಹಳ್ಳಿ ಪ್ರೌಢಶಾಲೆ, ಮಾದರಹಳ್ಳಿ ಪ್ರೌಢಶಾಲೆಗಳ ಕೊಠಡಿ ನಿರ್ಮಾಣಕ್ಕೆ ತಲಾ 16.40 ಲಕ್ಷ ರೂ., ಮಾದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ 13.90 ಲಕ್ಷ, ಚಾಮನಹಳ್ಳಿ, ಸಬ್ಬನಹಳ್ಳಿ, ಚನ್ನೇಗೌಡನದೊಡ್ಡಿ, ಯಡಗನಹಳ್ಳಿ, ದೇವರಹಳ್ಳಿ, ಬ್ಯಾಡರಹಳ್ಳಿ, ಮದ್ದೂರು ಉರ್ದು ಶಾಲೆಗೆ ತಲಾ 27.80 ಲಕ್ಷ, ವಡ್ಡರಹಳ್ಳಿ ಕಿರಿಯ ಪ್ರಾಥಮಿಕ ಶಾಲೆಗೆ 13.90 ಲಕ್ಷ ಒಟ್ಟು 3.21 ಕೋಟಿ ರೂ ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣ  ಅಭಿವೃದ್ದಿ ಕಾಮಗಾರಿಗೆ ಕ್ರಮ ಕೈಗೊಂಡಿದ್ದೇನೆ ಎಂದರು.

ರೈತರ, ಕೂಲಿ ಕಾರ್ಮಿಕರ, ಬಡವರ್ಗದ ಮಕ್ಕಳು ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಪ್ರತಿ ಹೋಬಳಿ ವ್ಯಾಪ್ತಿಯಲ್ಲಿ ಮೊರಾರ್ಜಿ ವಸತಿ ಶಾಲೆ ಹಾಗೂ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ತೆರೆಯುತ್ತಿದ್ದೇನೆ ಎಂದರು.

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಬೇಕಾದರೆ ನಮ್ಮ ತಾಯಿಯೇ ಪ್ರೇರಣೆ. ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ಹಣ, ಮನೆಕಟ್ಟಿಕೊಡಲು ಸಾಧ್ಯವಿಲ್ಲ. ಹಾಗಾಗಿ ಕ್ಷೇತ್ರದಲ್ಲಿ ಶಾಲಾ-ಕಾಲೇಜುಗಳನ್ನು ಅಭಿವೃದ್ದಿಪಡಿಸಿದರೆ ಪ್ರತೀ ಮನೆಯವರು ವಿದ್ಯಾಭ್ಯಾಸ ಪಡೆದು ಅಭಿವೃದ್ದಿ ಕಾಣುತ್ತಾರೆ. ಇದು ನನ್ನ ಸಾಧನೆಯಲ್ಲವೇ ಎಂದು ಪ್ರಶ್ನಿಸಿದರು.

ಇದೇ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ದೊಡ್ಡಿ ಶಿವರಾಮು, ತಾಲ್ಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಮುಖಂಡರಾದ ಎಚ್.ಎಂ.ಮರಿಮಾದೇಗೌಡ, ಗ್ರಾ.ಪಂ ಸದಸ್ಯರಾದ ಸಿದ್ದರಾಜು, ತಿಬ್ಬಯ್ಯ, ಸೀನಪ್ಪ, ಶಿವಲಿಂಗೇಗೌಡ, ಇಂಜಿನಿಯರ್ ಮಹದೇವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ