ಮಂಡ್ಯ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ವಜ್ರಮುನಿ 7 ವರ್ಷಗಳಿಂದ ಮಂಡ್ಯದಲ್ಲೇ ಸೇವೆ ಸಲ್ಲಿಸುತ್ತಿದ್ದು ಅವ್ಯವಹಾರ, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ನಿರ್ದೇಶಕರಿಗೆ ಕರ್ನಾಟಕ ಸ್ವಾಭಿಮಾನಿ ಸಮ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಎಚ್.ಎನ್.ನರಸಿಂಹಮೂರ್ತಿ ದೂರು ನೀಡಿದ್ದಾರೆ.
ಮಂಡ್ಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಸರಿಯಾಗಿ ಕೆಲಸ ನಿರ್ವಹಿಸದೇ ರಶೀದಿ ಪುಸ್ತಕಗಳ ಮೂಲಕ ಹಣ ದುರುಪಯೋಗ ಮಾಡಿಕೊಂಡು ಆಕ್ರಮವಾಗಿ ಹಣ, ಅಸ್ತಿಯನ್ನು ಮಾಡಿದ್ದಾರೆ. ಕಚೇರಿಯಲ್ಲಿ ಇರದೇ ಸಹಿ ಮಾಡಿ ದೇವಸ್ಥಾನ, ಸಂಬಂಧಿಕರ ಮನೆ, ಹಬ್ಬ, ಜಾತ್ರೆ ಅಂತ ಅವರಿವರ ಮನೆಗೆ ಹೋಗುತ್ತಾ ಕರ್ತವ್ಯಲೋಪವೆಸಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಇವರ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ ಅಮಾನತ್ತು ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಮುಖ್ಯ ಮಂತ್ರಿಗಳು ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಬೆಂಗಳೂರು, ಮಂಡ್ಯ ಜಿಲ್ಲಾಧಿಕಾರಿಗಳು ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಿಗೆ ನರಸಿಂಹಮೂರ್ತಿ ದೂರು ನೀಡಿದ್ದಾರೆ.




