Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ

ಮಂಡ್ಯನಗರದಿಂದ ನಿನ್ನೆ ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ ಲಿಖಿತಾ ಬೆಂಗಳೂರಿನ ಕೇಂಗೇರಿ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಆಕೆಯನ್ನು ಮಂಡ್ಯಕ್ಕೆ ಕರೆತರಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ಮೂಲಗಳು ತಿಳಿಸಿವೆ.

ಮಂಡ್ಯನಗರ ಹೊಸಹಳ್ಳಿಯಿಂದ ಲಿಖಿತಾ ನಾಪತ್ತೆಯಾಗಿರುವ ಬಗ್ಗೆ ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಷಕರಾದ ಪ್ರಕಾಶ್ ದೂರು ದಾಖಲಿಸಿದ್ದರು, ಈ ಹಿನ್ನೆಲೆಯಲ್ಲಿ ಬಾಲಕಿಯ ಪತ್ತೆಗಾಗಿ ಮಂಡ್ಯ ಪೊಲೀಸರು ಮೂರು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದರು. ಸದ್ಯ ಆಕೆ ಕೇಂಗೇರಿ ವ್ಯಾಪ್ತಿಯಲ್ಲಿ ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಆಕೆಯನ್ನು ಮಂಡ್ಯಕ್ಕೆ ಕರೆತಂದ ನಂತರ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!