Friday, November 20, 2026

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು : ಹೈಕೋರ್ಟ್ ಆದೇಶ

ಕೋಲಾರ ಜಿಲ್ಲೆಯ ಮಾಲೂರು ಶಾಸಕ ಕಾಂಗ್ರೆಸ್‌ ಕೆ ವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಅಸಿಂಧುಗೊಳಿಸಿ ಮಹತ್ವದ ಆದೇಶ ಮಾಡಿದೆ. ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (ಸಿಇಸಿ) ಹೈಕೋರ್ಟ್‌ ನಿರ್ದೇಶಿಸಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ ವೈ ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸುವಂತೆ ಕೋರಿ 248 ಮತಗಳಿಂದ ಸೋತಿದ್ದ ಬಿಜೆಪಿಯ ಅಭ್ಯರ್ಥಿ ಕೆ ಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ ದೇವದಾಸ್ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಒಂದು ತಿಂಗಳ ಮಟ್ಟಿಗೆ ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದ ದೃಶ್ಯಾವಳಿಗಳನ್ನು ಚಿತ್ರೀಕರಿಸಿ ಶೇಖರಿಸಿಟ್ಟಿರುವ ಹಾರ್ಡ್‌ಡಿಸ್ಕ್ ಅನ್ನು ಮೆಸರ್ಸ್‌ ಐಕಿಯಾ ಬಿಸಿನೆಸ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ಯಿಂದ ಪಡೆಯಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ವಿವರಣೆ ನೀಡಿ ಪ್ರಮಾಣ ಪತ್ರ ಸಲ್ಲಿಸುವಂತೆ ಕೋಲಾರ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ವೆಂಕಟರಾಜು ಅವರಿಗೆ ನಿರ್ದೇಶನ ನೀಡಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಕೃಪೆ : ಬಾರ್ & ಬೆಂಚ್‌

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ