Friday, November 20, 2026

ಪ್ರಾಯೋಗಿಕ ಆವೃತ್ತಿ

ಸುಸಜ್ಜಿತ ಡಯಾಗ್ನೋಸ್ಟಿಕ್ ಸೆಂಟರ್‌ ಆರಂಭದಿಂದ ಅನುಕೂಲ ; ರವಿಕುಮಾರ್

ಆರೋಗ್ಯ ಸೇವೆಗಾಗಿ ಬೆಂಗಳೂರು ಮೈಸೂರಿಗೆ ತೆರಳುತ್ತಿದ್ದ ಜನರಿಗೆ ಇಂದು ಮಂಡ್ಯ ನಗರದಲ್ಲಿಯೇ ಸುಸಜ್ಜಿತ ಡಯಾಗ್ನೋಸ್ಟಿಕ್ ಸೆಂಟರ್‌ ನಿರ್ಮಾಣವಾಗಿದೆ. ಲಕ್ಷ್ಮೀ ಡಯಾಗ್ನೋಸ್ಟಿಕ್‌ ಸೆಂಟರ್‌ ಅತ್ಯುತ್ತಮ ಟೆಕ್ನಾಲಜಿ ಹೊಂದಿರುವುದರಿಂದ ಮಂಡ್ಯ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಪಿ.ರವಿಕುಮಾರ್‌ ತಿಳಿಸಿದರು.

ಮಂಡ್ಯ ಅಶೋಕ ನಗರದದಲ್ಲಿ ಲಕ್ಷ್ಮೀ ಡಯಾಗ್ನೋಸ್ಟಿಕ್‌ ಸೆಂಟರ್‌ ಉದ್ಘಾಟಿಸಿ ಮಾತನಾಡಿದ ಅವರು, ಜನರ ಈ ಡಯಾಗ್ನೋಸ್ಟಿಕ್‌ ಸೆಂಟರ್‌ ಉಪಯೋಗ ಪಡೆದು ಕೊಂಡು, ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕೆಂದು ತಿಳಿಸಿದರು.

ಎಡಿಜಿಪಿ ರವಿಕಾಂತೇಗೌಡ ಮಾತನಾಡಿ, ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಡಾ.ವಿಭುನಂದನ್‌ ಲಕ್ಷ್ಮೀ ಡಯಾಗ್ನೋಸ್ಟಿಕ್‌ ಸೆಂಟರ್‌ ತೆರೆದಿದ್ದಾರೆ, ಇವರು ಜನರಿಗೆ ಉತ್ತಮ ಸೇವೆ ನೀಡಲಿ ಎಂದು ಆಶಿಸುತ್ತೇನೆ. ಜನರು ಉತ್ತಮ ಆರೋಗ್ಯಕ್ಕಾಗಿ ಅತ್ಯಾಧುನಿಕ ಡಯಾಗ್ನೋಸ್ಟಿಕ್‌ ಸೆಂಟರ್‌ ಅನ್ನು ಮಂಡ್ಯ ನಗರದಲ್ಲಿ ತರೆಯಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಾ.ವಿಭುನಂದನ್, ಡಿಎಚ್‌ಒ ಡಾ.ಕೆ.ಮೋಹನ್‌, ಸೆಂಟರ್‌ನ ಲೊಕಾನಂದ್, ರಮ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ