Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯನಗರ ಸಂಚಾರ ವ್ಯವಸ್ಥೆ ಸುಧಾರಣೆಗೆ ಕ್ರಮ- ಶಾಸಕ ರವಿಕುಮಾರ್

ಸಾರ್ವಜನಿಕರ ಹಿತದೃಷ್ಟಿಯಿಂದ ಮಂಡ್ಯ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಲು ಹಲವು ಸುಧಾರಣಾ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ತಿಳಿಸಿದರು.

ಮಂಡ್ಯನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ನಗರಸಭೆ, ಸಾರಿಗೆ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹದಗೆಟ್ಟಿರುವ ಸಂಚಾರ ವ್ಯವಸ್ಥೆಯನ್ನು ಸುವ್ಯವಸ್ಥೆಗೆ ತರುವುದಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸುವುದು ಅನಿವರ‍್ಯವಾಗಿದೆ ಎಂದರು.

ಹೆಲ್ಮೆಟ್ ರಹಿತ ಚಾಲನೆಗೆ ದಂಡವಿಲ್ಲ

ಬುಧವಾರ (ಅ.4)ದಿಂದ ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸುವುದಿಲ್ಲ. ಬದಲಿಗೆ ಅವರು ಹೆಲ್ಮೆಟ್ ಖರೀದಿಸುವವರೆಗೆ ವಾಹನವನ್ನು ವಶದಲ್ಲಿಟ್ಟುಕೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೆಲ್ಮೆಟ್ ಬಗ್ಗೆ ಜಾಗೃತಿಯನ್ನು ಹಲವಾರು ವರ್ಷಗಳಿಂದ ಮೂಡಿಸಲಾಗಿದೆ. ಇನ್ನು ಮುಂದೆ ಹೆಲ್ಮೆಟ್ ಧರಿಸದೆ ಸಂಚರಿಸಿದಲ್ಲಿ ದಂಡ ವಿಧಿಸದೆ ಹೆಲ್ಮೆಟ್ ಖರೀದಿಸುವವರೆಗೆ ವಾಹನವನ್ನು ವಶದಲ್ಲಿಟ್ಟುಕೊಳ್ಳಲಾಗುವುದು. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಎಲ್ಲರೂ ಹೆಲ್ಮೆಟ್ ಧರಿಸಬೇಕು. ಯಾವುದೇ ಶಿಫಾರಸ್ಸುಗಳಿಗೂ ಮಣಿಯುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದವರಿಗೆ ಆರಂಭದಲ್ಲಿ ಎಚ್ಚರಿಕೆ ನೀಡಲಾಗುವುದು. ಅವರಿಗೆ ಯಾವುದೇ ದಂಡ ವಿಧಿಸಲಾಗುವುದಿಲ್ಲ ಎಂದ ಶಾಸಕರು, ಕುಟುಂಬದವರು ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಕಾರನ್ನು ನಿಲ್ಲಿಸಿ, ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗುವುದು ಎಂದು ಹೇಳಿದರು.

ಬೀದಿಬದಿ ವ್ಯಾಪಾರಿಗಳಿಗೆ ಪರ‍್ಯಾಯ ವ್ಯವಸ್ಥೆ

ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ನಗರದ ಆರು ಕಡೆಗಳಲ್ಲಿ ಹೈಟೆಕ್ ಮಾದರಿಯ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಪ್ರಾಯೋಗಿಕವಾಗಿ ಗುತ್ತಲು ರಸ್ತೆಯ ಕುವೆಂಪು ಶತಮಾನೋತ್ಸವ ಶಾಲೆ ಬಳಿ 10×10 ಅಳತೆಯ ಜಾಗದಲ್ಲಿ ಅಲ್ಲಿನ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ವ್ಯವಸ್ಥೆ ಮಾಡಿಕೊಡಲಾಗುವುದು. ಮೇಲ್ಛಾವಣಿ, ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುವುದು. ಇದು ಯಶಸ್ವಿಯಾದಲ್ಲಿ ಉಳಿದೆಡೆಯೂ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಕಲಾಮಂದಿರ ರಸ್ತೆಯಲ್ಲಿ ಫುಡ್ ಸ್ಟ್ರೀಟ್ 

ಕಲಾಮಂದಿರ ರಸ್ತೆಯಲ್ಲಿ ಫುಡ್ ಸ್ಟಿçÃಟ್ ಆಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದ್ದು, ಮಕ್ಕಳು, ಮಹಿಳೆಯರಿಗೆ ಮನರಂಜನೆಗೆ ಒತ್ತು ನೀಡಲಾಗುವುದು. ಉದ್ಯಾನಗಳಲ್ಲಿ ಕುಡುಕರು ಮತ್ತು ರೌಡಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ಮಟ್ಟ ಹಾಕಲು ಕ್ರಮವಹಿಸಲಾಗುವುದು ಎಂದರು.

ಸಿಸಿ ಟಿವಿ ಕಣ್ಗಾವಲಿನಲ್ಲಿ ನಗರ

ಮಂಡ್ಯ ನಗರದೊಳಗೆ ಪ್ರಸ್ತುತ 16 ಕಡೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳಿದ್ದು, ಉಳಿದಂತೆ ನಗರದೊಳಗೆ ಆಯಾಕಟ್ಟಿನ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಇದರ ಮೂಲಕ ಅಪರಾಧಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ ನಂತರ ಅವುಗಳ ನಿರ್ವಹಣೆಯನ್ನು ಪೊಲೀಸ್ ಇಲಾಖೆ ಮತ್ತು ನಗರಸಭೆ ಮಾಡುತ್ತವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗುತ್ತಲು ಕೆರೆ ಅಭಿವೃದ್ಧಿ

ಗುತ್ತಲು ಕೆರೆಯನ್ನು 7.50 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ಚರಂಡಿ ನೀರು ಕೆರೆಗೆ ಸೇರದಂತೆ ಕ್ರಮ ವಹಿಸಲಾಗುವುದು. ಕೆರೆ ಏರಿ ಮೇಲೆ ವಾಯು ವಿಹಾರದ ರಸ್ತೆ ನಿರ್ಮಿಸಿ ವಾಯು ವಿಹಾರಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

2.20 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

ಗೌರಿಶಂಕರ ಕಲ್ಯಾಣ ಮಂಟಪದಿಂದ ನಗರದ ಬೆಸಗರಹಳ್ಳಿ ರಾಮಣ್ಣ ವೃತ್ತದವರೆಗೆ 2.20 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು. ಇದರ ಮಧ್ಯೆ ಕನ್ನಿಕಾಪರಮೇಶ್ವರಿ ದೇವಾಲಯದ ವೃತ್ತ, ಹೊಸಹಳ್ಳಿ ವೃತ್ತ, ಬೆಸಗರಹಳ್ಳಿ ರಾಮಣ್ಣ ವೃತ್ತವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ. ಜತೆಗೆ ರಸ್ತೆಯಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ `ಬಸ್ ಬೇ’ಗಳನ್ನು ನಿರ್ಮಿಸಲಾಗುವುದು. ಡೆಲ್ಟಾ ವತಿಯಿಂದ 1.50 ಕೋಟ ರೂ. ಅನುದಾನ ಬರುವ ನಿರೀಕ್ಷೆ ಇದೆ. ಈ ಹಣದಲ್ಲಿ ಅತ್ಯಾಧುನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ಮುಲಾಜಿಲ್ಲದೆ ಪ್ರಕರಣ ದಾಖಲು

ಸಾರಿಗೆ ಇಲಾಖೆ ಬಸ್‌ಗಳನ್ನು ಎಲ್ಲೆಂದರಲ್ಲಿ ನಿಯಮಬಾಹಿರವಾಗಿ ನಿಲುಗಡೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಮುಂದುವರಿದಲ್ಲಿ ಯಾವುದೇ ಮುಲಾಜಿಲ್ಲದೆ ಚಾಲಕರ ವಿರುದ್ಧ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

30 ಕೋಟಿ ರೂ.ಗಳಲ್ಲಿ ಮುಖ್ಯರಸ್ತೆ ಅಭಿವೃದ್ಧಿ

ಮಂಡ್ಯ ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಕಲ್ಲಹಳ್ಳಿಯ ಜ್ಯೋತಿ ಇಂಟರ್‌ನ್ಯಾಷನಲ್ ಹೋಟೆಲ್‌ವರೆಗಿನ ಮುಖ್ಯ ರಸ್ತೆಯನ್ನು (ಹಳೇ ಹೆದ್ದಾರಿ) 30 ಕೋಟಿ ರೂ. ವೆಚ್ಚದಲ್ಲಿ ಹೆದ್ದಾರಿ ಪ್ರಾಧಿಕಾರದವರು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದಾರೆ. ಶೀಘ್ರ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಾರಂಭವಾಗಲಿದೆ. ಇದರಲ್ಲಿ ಹೈಟೆಕ್ ಮಾದರಿಯಲ್ಲಿ ಪುಟ್‌ಪಾತ್ ನಿರ್ಮಾಣ, ಬಸ್ ಬೇಗಳ ನಿರ್ಮಾಣ ಮಾಡಲಾಗುವುದು ಎಂದು ಶಾಸಕರು ಹೇಳಿದರು.

ಮಹಾವೀರ ವೃತ್ತದ ಬಳಿ ಅಂಡರ್‌ಪಾಸ್ ನಿರ್ಮಿಸಲಾಗುವುದು. ಜೆ.ಸಿ. ವೃತ್ತದಿಂದ ಹೊಳಲು ವೃತ್ತದವರೆಗೆ ಸಿಮೆಂಟ್ ರಸ್ತೆ ಮಾಡಿ ನಂತರ ಎರಡೂ ಕಡೆ ಚರಂಡಿ ನಿರ್ಮಿಸುವ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್, ಅಪರ ಅಧೀಕ್ಷಕ ತಿಮ್ಮಯ್ಯ, ಉಪ ಅಧೀಕ್ಷಕ ಶಿವಮೂರ್ತಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!