ಮಕ್ಕಳಲ್ಲಿ ಪ್ರತಿಭೆ ಮತ್ತು ಶಿಕ್ಷಣ ಇದ್ದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಸಾಧನೆಯೇ ನಿಜವಾದ ಸ್ವರ್ಗ ಎಂದು ಮಂಡ್ಯ ವಿಧಾನಸಭಾ ಶಾಸಕ ಪಿ. ರವಿಕುಮಾರ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು
ಮಂಡ್ಯ ನಗರದ ಸಂತ ಜೋಸೆಫರ ಪ್ರೌಢಶಾಲಾಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ತಂದೆ ತಾಯಿ ಕನಸನ್ನು ಮಕ್ಕಳು ನನಸು ಮಾಡಬೇಕು, ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅನೇಕ ಸವಲತ್ತುಗಳನ್ನು ನೀಡಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳು ಆಗಬಾರದು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಯಶಸ್ಸು ಸಾಧಿಸಿ ಕೀರ್ತಿವಂತರಾಗಬೇಕು ಎಂದರು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ಮಾರ್ಗದರ್ಶನದೊಂದಿಗೆ ಅವಕಾಶ ಕಲ್ಪಿಸಲಾಗುವುದೇ ಪ್ರತಿಭಾ ಕಾರಂಜಿ ಉದ್ದೇಶ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪಠ್ಯೇತರ ಚಟುವಟಿಕೆಗಳು ಸಹಾಯ ಮಾಡುತ್ತದೆ ಎಂದರು.
ಕಳೆದ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿರುವುದಿಲ್ಲ, ಈ ಭಾರಿಯ ಫಲಿತಾಂಶ ಉತ್ತಮಗೊಳಿಸಲು ಕಳೆದ 10 ತಿಂಗಳಿಂದ ಜಿಲ್ಲಾ ಮಟ್ಟದಲ್ಲಿ ಮುಖ್ಯ ಶಿಕ್ಷಕರು ಹಾಗೂ ಅಧಿಕಾರಿಗಳ ಸಭೆಗಳನ್ನು ನಡೆಸಿ ಪ್ರಗತಿ ಪರಿಶೀಲನಾ ನಡೆಸುತ್ತಿದೆ, ಎಸ್ ಎಸ್ ಎಲ್ ಸಿ ಫಲಿತಾಂಶ ಉತ್ತಮ ಸ್ಥಾನದಲ್ಲಿ ಬರಬೇಕೆಂದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು ಇದು ಶಿಕ್ಷಣ ಸಂಸ್ಥೆಗಳಿಂದ ಮಾತ್ರ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದದ ಅಧ್ಯಕ್ಷ ನಯೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಶಾಲ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್ ಶಿವರಾಮೇಗೌಡ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಣ ಸಂಘ ಅಧ್ಯಕ್ಷ ಕೆ. ನಾಗೇಶ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.




