Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಶಾಸಕ ರವಿಕುಮಾರ್ ಹುಟ್ಟುಹಬ್ಬ; ಮಮತೆಯ ಮಡಿಲು ಕೇಂದ್ರದಲ್ಲಿ ಅನ್ನದಾಸೋಹ

ಪರಿಸರ ರೂರಲ್ ಡೆವಲಪ್ಮೆಂಟ್ ಸೊಸೈಟಿ, ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್‌ಗೌಡ (ಗಣಿಗ) ರವರ ಜನುಮದಿನದ ಪ್ರಯುಕ್ತ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್ ಬಳಿ ಗರ್ಭಿಣಿಯರು, ಬಾಣಂತಿಯರು ಹಾಗೂ ರೋಗಿಗಳ ಸಂಬಂಧಿಕರಿಗೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಹೆಚ್.ಅಶೋಕ್ ಅವರ ನೇತೃತ್ವದಲ್ಲಿ ಅನ್ನದಾಸೋಹ ಕಾರ್ಯಕ್ರಮ ನಡೆಯಿತು.

ಬಳಿಕ ಮಾತನಾಡಿದ ಹಾಲಹಳ್ಳಿ ಅಶೋಕ್ ಅವರು ಯುವಧ್ವನಿ, ಮಂಡ್ಯ ಅಭಿವೃದ್ಧಿ ಕನಸಿನ ತರುಣ, ಶಾಸಕ ಪಿ.ರವಿಕುಮಾರ್ ಅವರು ಮಂಡ್ಯ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುವ ನಿಟ್ಟಿನಲ್ಲಿ ಉತ್ತಮವಾಗಿ ಕೆಲಸ ಮಾಡಲಿ ಎಂದು ಹೇಳಿದರು.

ಶಾಸಕ ರವಿಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ವಿವಿಧ ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಳ್ಳುವ ಮೂಲಕ ಕ್ಷೇತ್ರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಮಂಡ್ಯ ನಗರದ ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಅನ್ನದಾಸೋಹ ವಿತರಣೆ ಮಾಡಲಾಗಿದೆ. ಶಾಸಕ ರವಿಕುಮಾರ್ ಅವರಿಗೆ ತಾಯಿ ಚಾಮುಂಡೇಶ್ವರಿ ಆಯಸ್ಸು, ಆರೋಗ್ಯ ಕರುಣಿಸುವ ಮೂಲಕ ಮಂಡ್ಯ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಲು ಉನ್ನತ ಸ್ಥಾನ ಸಿಗಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅಂಜನಾ ಶ್ರೀಕಾಂತ್, ಉಪಾಧ್ಯಕ್ಷೆ ನೀಲಾ ಮೂರ್ತಿ, ನಗರಸಭಾ ಮಾಜಿ ಸದಸ್ಯ ಕೆ.ಎಲ್.ನಾಗೇಂದ್ರ, ಬೇಲೂರು ಪುರುಷೋತ್ತಮ್, ಗ್ರಾಪಂ ಸದಸ್ಯ ಪ್ರದೀಪ್ ಸಿದ್ದೇಗೌಡ,ಅಜಿತ್, ಮಂಗಲ ಯೋಗೇಶ್ ಇತರರು ಭಾಗವಹಿಸಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ