Thursday, September 19, 2024

ಪ್ರಾಯೋಗಿಕ ಆವೃತ್ತಿ

ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂಬುದು ನಮ್ಮೆಲ್ಲರ ಆಸೆ: ಶಾಸಕ ಉದಯ್

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ, ಹಾಗಾಗಿ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರಕಬೇಕು ಎಂಬುದು ನಮ್ಮೆಲ್ಲರ ಆಸೆಯಾಗಿದೆ ಎಂದು ಮದ್ದೂರು ಶಾಸಕ ಉದಯ್ ಡಿ.ಕೆ.ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಮದ್ದೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಮಾನದಂಡ ಇರುತ್ತದೆ, ಅದಕ್ಕೆ ಅನುಗುಣವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದರಲ್ಲಿ ಅನುಮಾನ ಇಲ್ಲ ಸ್ಪಷ್ಟಪಡಿಸಿದರು.

ಈ ಹಿಂದೆ ದಲಿತರು ಮುಖ್ಯಮಂತ್ರಿ ಆಗುವ ಅವಕಾಶವಿತ್ಗತು. ದಲಿತರನ್ನ ಮುಖ್ಯಮಂತ್ರಿ ಮಾಡುವುದು ಬಿಡುವುದು ಹೈ ಕಮಾಂಡ್ ಗೆ ಬಿಟ್ಟ ವಿಚಾರ ಎಂದ ಅವರು, ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆತರೆ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟಿಸಲಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾದ ಆಡಳಿತ ನೀಡುತ್ತಿದ್ದು, ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಸಿಎಂ ಆಗಬೇಕೆಂದು ನಮ್ಮ ಬಯಕೆಯಾಗಿದೆ, ಇದನ್ನು ದೊಡ್ಡ ವಿಚಾರ ಮಾಡುವುದು ಬೇಡ ಎಂದು ಪ್ರತಿಕ್ರಿಯಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!