Thursday, May 16, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಸರ್ಕಾರದ ಸವಲತ್ತು ಪಡೆದು ಸ್ವಾವಲಂಬಿಗಳಾಗಿ; ಶಾಸಕ ಉದಯ್

ವರದಿ: ಪ್ರಭು ವಿ ಎಸ್

ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು ಇದರ ಸದುಪಯೋಗಕ್ಕೆ ಮುಂದಾಗುವ ಮೂಲಕ ಸ್ವಾವಲಂಬಿ ಬದುಕನ್ನು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಕೆಎಂ ಉದಯ್ ತಿಳಿಸಿದರು.

ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗ್ರಾಮೀಣ ಕೈಗಾರಿಕೆ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ವತಿಯಿಂದ ‌ನಡೆದ ವಿಶೇಷ ಘಟಕ, ಗಿರಿಜನ ಉಪ ಯೋಜನೆ ಹಾಗೂ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ‌ಅರ್ಹಫಲಾನುಭವಿಗಳಿಗೆ ‌‌‌ಹಲವು ಸಲಕರಣೆಗಳನ್ನು ವಿತರಿಸಿ ಅವರು ಮಾತನಾಡಿದರು.

‌‌‌ಸರ್ಕಾರದಿಂದ ಸಿಗುವ ಹಲವು ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಉತ್ತಮ ಜೀವನ ನಿರ್ವಹಣೆ ಜತೆಗೆ ಸ್ವಾವಲಂಬಿ ಬದುಕನ್ನು ಕಂಡುಕೊಂಡು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಇಲಾಖೆ ವತಿಯಿಂದ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಜತೆಗೆ ತರಬೇತಿ ಪಡೆದ ಫಲಾನುಭವಿಗಳು ಬ್ಯಾಂಕ್ ಗಳ ಮೂಲಕ ಸಾಲ ಪಡೆದು ಆರ್ದಿಕವಾಗಿ ಮುನ್ನಡೆ ಸಾಧಿಸುವ ಮೂಲಕ ಇತರರಿಗೆ ಮಾದರಿಯಾಗಬೇಕೆಂದರು.

‌ ಕಾರ್ಯಕ್ರಮದಲ್ಲಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ, ಪವರ್ ಟೂಲ್ಸ್, ಮರಗೆಲಸ, ಗಾರೆ ಕೆಲಸ ಹಾಗೂ ಮಡಿವಾಳ ಸಮುದಾಯದವರಿಗೆ ವೃತ್ತಿನಿರತ ಕುಶಲಕರ್ಮಿಗಳಿಗೆ ಅಗತ್ಯವುಳ್ಳ ಸಲಕರಣೆಗಳನ್ನು ವಿತರಿಸಲಾಯಿತು‌‌. ‌‌‌‌ ‌‌‌

ಇಲಾಖೆಯಿಂದ ಸಿಗುವ ಹಲವು ಸೌಲಭ್ಯಗಳನ್ನು ವಿತರಣೆ ಮಾಡಲು ಮದ್ದೂರು ತಾಲೂಕಿನಿಂದ 900 ಅರ್ಜಿಗಳು ಸ್ಪೀಕತವಾಗಿದ್ದು, ಈ ಪೈಕಿ ಸರ್ಕಾರದ ಸುತ್ತೋಲೆ ಪ್ರಕಾರ ನೂರು ಮಂದಿ ಅಭ್ಯರ್ಥಿಗಳನ್ನು ಲಾಟರಿ ಮೂಲಕ ಆಯ್ಕೆ ಗೂಳಿಸಿ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ವಿತರಿಸಲಾಯಿತು.

ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಜಿಲ್ಲಾ ಉಪ ನಿರ್ದೇಶಕಿ ಶೈಲಜ, ಸಹಾಯಕ ಗಿರೀಶ್ ಇದ್ದರು. ಸ್ಥಳಿಯ‌ ಮುಂಖಡರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!