Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಂಬದಹಳ್ಳಿ ಮೊಬೈಲ್ ನೆಟ್ವರ್ಕ್ ಸಮಸ್ಯೆಗೆ ಪರಿಹಾರ

ಮಂಡ್ಯ ತಾಲೂಕಿನ ಕಂಬದಹಳ್ಳಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ಪರಿಹರಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಎಲ್ಲಾ ಸೇವೆಗಳು ಡಿಜಿಟಲ್ ಆಗಿರುವುದರಿಂದ ಗ್ರಾಹಕರು ಹಾಗೂ ಸಾರ್ವಜನಿಕರು ಆನ್ಲೈನ್ ನಲ್ಲಿ ವ್ಯವಹರಿಸುವುದು ತುಂಬಾ ಕಷ್ಟಕರವಾಗಿತ್ತು, ಕಳೆದ 10-15 ವರ್ಷಗಳಿಂದ ಗ್ರಾಮಸ್ಥರು ನೆಟ್ವರ್ಕ್ ಸಮಸ್ಯೆಯನ್ನು ಎದುರಿಸುತ್ತಿದ್ದರು. ಸುತ್ತಮುತ್ತಲ ಗ್ರಾಮಸ್ಥರು ಕಂಬದಹಳ್ಳಿ ಪುಟ್ಟಸ್ವಾಮಿ ಅವರ ಗಮನಕ್ಕೆ ತಂದಾಗ, ಅವರು ಸಂಬಂಧಪಟ್ಟ ಏರ್ಟೆಲ್ ಕಂಪನಿಯ ಮುಖ್ಯಸ್ಥರನ್ನು ಭೇಟಿ ಮಾಡಿ, ನೆಟ್ವರ್ಕ್ ಸಮಸ್ಯೆ ಪರಿಹರಿಸುವಂತೆ ಬೇಡಿಕೆ ಇಟ್ಟರು.

ಈ ಹಿನ್ನೆಲೆಯಲ್ಲಿ ಇಂದು (ಡಿ.12) ಏರ್ಟೆಲ್ ಕಂಪನಿಯ ಸಿಇಓ ರಜನೀಸ್ ವರ್ಮಾ, ಇದೆ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯ ಗ್ರಾಮವೊಂದಲ್ಲಿ ಟವರ್ ಉದ್ಘಾಟಿಸಿ, ಕಂಬದಹಳ್ಳಿ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ನೆಟ್ವರ್ಕ್ ಸಮಸ್ಯೆಗೆ ಪರಿಹಾರ ನೀಡಿದರು.

ಇದೇ ಸಂದರ್ಭದಲ್ಲಿಏರ್ಟೆಲ್ ಕಂಪನಿ ಹಾಗೂ ಕಂಬದ ಹಳ್ಳಿಯ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟೇಶ್ವರ ಸೇವಾ ಸಮಿತಿ ಜಂಟಿಯಾಗಿ ರೈತರಿಗೆ ಉಚಿತವಾಗಿ ಸಸಿ ವಿತರಿಸುವ ಹಾಗೂ ಸಾರ್ವಜನಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದವು.

ಕಾರ್ಯಕ್ರಮದಲ್ಲಿ ಏರ್ಟೆಲ್ ಕಂಪನಿಯ ಎಲ್ಲಾ ಅಧಿಕಾರಿ ವರ್ಗ ಹಾಗೂ ಕಂಬದಳ್ಳಿಯ ಗ್ರಾಮ ಪಂಚಾಯಿತಿ
ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ