Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಒಳಮೀಸಲಾತಿಗಾಗಿ ಅಣಕು ಶವಯಾತ್ರೆಗೆ ಯತ್ನ ; ಪೊಲೀಸರ ಅಡ್ಡಿ

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಜಾರಿಗೊಳಿಸಲು ಮೀನಾಮೇ‍ಷ ಎಣಿಸುತ್ತಿದೆ ಎಂದು ಆರೋಪಿಸಿ ಮಂಡ್ಯನಗರದಲ್ಲಿ ಸರ್ಕಾರದ ಶವ ಯಾತ್ರೆ ನಡೆಸಲು ಮುಂದಾದ ಪ್ರತಿಭಟನಾಕಾರರಿಗೆ ಪೊಲೀಸರು ಅಡ್ಡಿಪಡಿಸಿ, ಶವಯಾತ್ರೆಯ ಸಾಮಾಗ್ರಿಗಳನ್ನು ಹೊತ್ತೊಯ್ದರು.

ಮಂಡ್ಯನಗರ ಜೆ.ಸಿ.ವೃತ್ತದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಬೆಳಿಗ್ಗೆ ಅಣುಕು ಶವಯಾತ್ರೆ ಮಾಡಲು ಮುಂದಾದಾಗ ಪೊಲೀಸರು, ಅಡ್ಡಿಪಡಿಸಿದರು.

ಒಳಮೀಸಲಾತಿಯನ್ನು ರಾಜ್ಯ ಸರ್ಕಾರಗಳೇ ಜಾರಿಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿ ಒಂದು ವರ್ಷ ಕಳೆಯುತ್ತಿದ್ದರು, ರಾಜ್ಯ ಸರ್ಕಾರ ಮಾತ್ರ ನಿದ್ದೆಯಿಂದ ಎಚ್ಚೆತ್ತಿಲ್ಲ, ದೇಶದ ಇತರೆ ರಾಜ್ಯಗಳಲ್ಲಿ ಈಗಾಗಲೇ ಒಳ ಮೀಸಲಾತಿ ಜಾರಿಯಾಗಿದೆ. ಆದರೆ ದಲಿತರ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಸರ್ಕಾರ ದಲಿತರನ್ನು ವಂಚಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕಪಡಿಸಿದರು. ತಮಟೆ, ನಗಾರಿ, ಜಾಗಟೆ ಬಾರಿಸಿ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮರಳಿಗ ಶಿವರಾಜು, ಎಲೆಚಾಕನಹಳ್ಳಿ ಸ್ವಾಮಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ


ರಾಜ್ಯದಲ್ಲಿ ಕೂಡಲೇ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಂದ ಮಂಡ್ಯನಗರದಲ್ಲಿ ಮಾದಿಗರ ಒಳ ಮೀಸಲಾತಿ ಜಾರಿಗಾಗಿ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಆರ್.ಕೆ.ಕುಮಾರ್, ಮುಖಂಡರಾದ ಸಿ.ಕೆ.ಪಾಪಯ್ಯ, ಅನ್ನದಾನಿ, ಚಂದ್ರು, ಕೃಷ್ಣ, ರಾಜು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ