Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೃಷಿಯಲ್ಲಿ ಆಧುನೀಕರಣ ತಂದವರು ಬಾಬು ಜಗಜೀವನರಾಮ್

ಕೃಷಿಯನ್ನು ಆಧುನೀಕರಣ ಮಾಡುವಲ್ಲಿ ಬಾಬು ಜಗಜೀವನ ರಾಮ್ ಅವರ ಕೊಡುಗೆ ಅಪಾರವಾಗಿದೆ. ಕೃಷಿ ಯ ಆಧುನೀಕರಣದಿಂದ ದೇಶದಲ್ಲಿ ಆಹಾರ ಉತ್ಪಾದನೆ ಹೆಚ್ಚಾಯಿತು ಎಂದು ಜಿಲ್ಲಾಧಿಕಾರಿ ಅಶ್ವತಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ‌ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಂ ರವರ 36ನೇ ಪುಣ್ಯತಿಥಿಯನ್ನು ಮಂಡ್ಯದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ಕಾವೇರಿ ಉದ್ಯಾನವನದಲ್ಲಿರುವ ಡಾ. ಬಾಬು ಜಗಜೀವನ ರಾಂ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಿಸಲಾಯಿತು.

ಭಾರತ ಉಪ ಪ್ರಧಾನಿಯಾಗಿ ಹಾಗೂ ಕೃಷಿ ಸಚಿವರಾಗಿ ಉತ್ತಮ ಕಾರ್ಯನಿರ್ವಹಣೆ ಮಾಡಿದವರು ಡಾ.ಬಾಬು ಬಾಬು ಜಗಜೀವನ ರಾಂ ರವರು.ಕೃಷಿಯನ್ನು ಆಧುನೀಕರಣ ಮಾಡುವಲ್ಲಿ ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ. ಕೃಷಿಯಲ್ಲಿ ಅವರ ಮಾಡಿರುವ ಸಾಧನೆಗೆ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಖ್ಯಾತಿ ಪಡೆದಿದ್ದಾರೆ ಎಂದರು.

ಬಾಬು ಜಗಜೀವನರಾಮ್ ಅವರ ಜನಪರ ಆಡಳಿತವನ್ನು ಎಲ್ಲರೂ ಮಾದರಿಯಾಗಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿ ಸಹಕರಿಸೋಣ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹ ಕಾಧಿಕಾರಿ ದಿವ್ಯಾಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಎಸ್.ಯತೀಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಬಿ. ರಂಗೇಗೌಡ,ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಆಕಾಶ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಆಯುಷ್ ಇಲಾಖೆಯ ಅಧಿಕಾರಿ ಡಾ.ಪುಷ್ಪಾ,ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘು ನಂದನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!