Saturday, October 19, 2024

ಪ್ರಾಯೋಗಿಕ ಆವೃತ್ತಿ

ಮೋದಿ ಆಗಮನ : ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಬೆಂಗಳೂರು- ಮೈಸೂರು ದಶಪಥ ರಸ್ತೆ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರಮೋದಿ ಅವರು ಮಾಚ್೯ 12 ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಹೆಚ್ ಎನ್ ಗೋಪಾಲಕೃಷ್ಣ ಸೂಚನೆ ನೀಡಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಪ್ರಧಾನಮಂತ್ರಿಗಳು ಮಂಡ್ಯ ಜಿಲ್ಲೆಯಲ್ಲಿ ರೋಡ್ ಶೋ, ದಶಪಥ ರಸ್ತೆಯ ಒಂದು ಭಾಗದಲ್ಲಿ ರಸ್ತೆಯ ಸಂಕೇತಿಕ ಉದ್ಘಾಟನೆ ಹಾಗೂ ಗೆಜ್ಹಲಗೆರೆ ಕಾಲೋನಿಯಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ವಾಹನ ನಿಲುಗಡೆ, ಕುಡಿಯುವ ನೀರು, ತಾತ್ಕಾಲಿಕ ‌ಶೌಚಾಲಯದ ವ್ಯವಸ್ಥೆಗಳಾಗಬೇಕು. ರೋಡ್ ಶೋ ಗೆ ಉತ್ತಮವಾಗಿ ಬ್ಯಾರಿಕ್ಯಾಡಿಂಗ್ ವ್ಯವಸ್ಥೆ ಯಾಗಬೇಕು, ನಾಡಗೀತೆ, ರಾಷ್ಟ್ರ ಗೀತೆಗಳನ್ನು ಹಾಡಲು ನುರಿತ ಕಲಾವಿದರನ್ನು ಆಯ್ಕೆ ಮಾಡಿ ತರಬೇತಿ ನೀಡಿ, ದಶಪಥ ರಸ್ತೆಯ ಸಾಂಕೇತಿಕ ಉದ್ಘಾಟನಾ ಸ್ಥಳದಲ್ಲಿ ವಿವಿಧ ಕಲಾತಂಡಗಳ ಪ್ರದರ್ಶನ ಆಯೋಜಿಸಬೇಕು‌ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ , ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಎನ್.ಹೆಚ್.ಎ.ಐ ಯೋಜನಾ ನಿರ್ದೇಶಕ ಶ್ರೀಧರ್, ಉಪವಿಭಾಗಾಧಿಕಾರಿ ‌ಕೀರ್ತನಾ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!