ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆ.17ರಿಂದ ಅ.2 ರವರೆಗೆ ಜಿಲ್ಲಾದ್ಯಂತ ಹಲವು ಸಮಾಜಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸೇವಾ ಪಾಕ್ಷಿಕ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಬಿಜೆಪಿ ಮುಖಂಡ ಸಿ.ಟಿ.ಮಂಜುನಾಥ್ ಹೇಳಿದರು.
ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಯುವ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರ ಆಯೋಜನೆ ಮಾಡಲಾಗುವುದು, ಜಿಲ್ಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುವುದು ಎಂದರು.
ದಿವ್ಯಾಂಗರಿಗೆ ಕೃತಕ ಕಾಲುಗಳ ವಿತರಣೆ, ಬೂತ್ ಮಟ್ಟದಲ್ಲಿ ಸಸಿ ನೆಡುವ ಕಾರ್ಯಕ್ರಮ, ಸೆ.25ರಂದು ದೀನದಯಾಳ್ ಉಪಧ್ಯಾಯ ಅವರ ಹುಟ್ಟುಹಬ್ಬ ಹಾಗೂ ಅ.2ರಂದು ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಹಲವು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ವಿವೇಕ್, ಶಿವಕುಮಾರ್, ನಾಗನಂದ ಉಪಸ್ಥಿತರಿದ್ದರು.




