ಮೋದಿ ಎಂಬ ಸರ್ ನೇಮ್ (ಉಪನಾಮ) ಹೊಂದಿರುವವರೆಲ್ಲ ಹಗರಣಗಳಲ್ಲಿ ಸಿಕ್ಕಿ ಬೀಳುತ್ತಿರುವುದೇಕೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದ ಗುಜರಾತ್ ನ ಸೂರತ್ ನ್ಯಾಯಾಲಯ ಇದೀಗ 30 ದಿನಗಳಿಗೆ ಜಾಮೀನು ಮಂಜೂರು ಮಾಡಿದೆ.
ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ಪ್ರಕಟಿಸಿದೆ.
ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮ ಹೊಂದಿರುವುದೇಕೆ ? ಎಂಬ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ನೀಡಿದ ದೂರು ನೀಡಿದ್ದರು.
2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್, ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ ಎಂದು ಪ್ರಶ್ನಿಸಿದ್ದರು.




