ಕರ್ನಾಟಕ ರಾಜ್ಯ ಯುತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರನ್ನು ಮಂಡ್ಯ ಜಿಲ್ಲೆಯ ಗಡಿಯೊಳಗೆ ಪ್ರವೇಶಿಸದಂತೆ ನಿರ್ಬಂಧಿಸಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಎಂ.ವಸಂತ್ ಕುಮಾರ್ ಒತ್ತಾಯಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಳೆದ ಮೇ.15 ರಂದು ನಲಪಾಡ್ ತಮ್ಮ ಬೆಂಬಲಿಗರೊಂದಿಗೆ ಮೈಷುಗರ್ ಸಕ್ಕರೆ ಕಾರ್ಖಾನೆಯೊಳಗೆ ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿದ್ದಲ್ಲದೆ, ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳ ಮೇಲೆ ದರ್ಪ ತೋರಿಸಿದ್ದಾರೆ. ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಇದೇ ರೀತಿ ವರ್ತಿಸಿದ್ದಾರೆ.
ಇವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ತನ್ನ ಬೆಂಬಲಿಗರೊಂದಿಗೆ ಪುಂಡಾಟಿಕೆ ನಡೆಸಿ ಜಿಲ್ಲೆಯ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವ ಸಂಭವವಿದ್ದು, ಈತನನ್ನು ಮಂಡ್ಯ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿರ್ಬಂಧಿಸಲು ಮನವಿ ಮಾಡಿದರು
ರಿಷಿಕುಮಾರ ಸ್ವಾಮಿಜಿ ಮತ್ತು ಮುತಾಲಿಕ್ ಇಬ್ಬರೂ ಮಂಡ್ಯ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆಗೆ ಧಕ್ಕೆ ತರುತ್ತಿದ್ದಾರೆ. ಅವರನ್ನು ನಿರ್ಬಂಧಿಸಬೇಕಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ತಡಬಡಾಯಿಸಿದರು.
ಶ್ರೀರಂಗಪಟ್ಟಣದ ಜಾಮೀಯ ಮಸೀದಿ ಹಿಂದೂ ದೇವಸ್ಥಾನ ಎಂದು ರುಷಿಕುಮಾರ ಸ್ವಾಮಿ ಹೇಳಲು ಯಾರು. ಅವನೇನು ಸಂಶೋಧನೆ ಮಾಡಿದ್ದಾನಾ ಎಂದೆಲ್ಲಾ ಪತ್ರಕರ್ತರು ತರಾಟೆಗೆ ತೆಗೆದುಕೊಂಡರು.
ಮೈಷುಗರ್ ಕಾರ್ಖಾನೆಯಲ್ಲಿ ಹಗರಣ ನಡೆದಿರುವ ಬಗ್ಗೆ ಲೋಕಾಯುಕ್ತರೇ ಬಿಜೆಪಿ ಪಕ್ಷದ ಅಧ್ಯಕ್ಷರಾಗಿದ್ದವರು ಮುಟ್ಟುಗೋಲು ಹಾಕಿಕೊಂಡು ನಷ್ಟ ಭರಿಸಲು ಆದೇಶ ನೀಡಿರುವ ಬಗ್ಗೆ ಸಮರ್ಪಕ ಉತ್ತರ ನೀಡಿಲಿಲ್ಲ.
ಸಮಾರಂಭದಲ್ಲಿ ಗ್ರಾಪಂ ಸದಸ್ಯ ಶ್ರೀನಿಧಿ ತಮ್ಮಯ್ಯ, ಚಾಮರಾಜು ಹಾಗೂ ಸಿ.ಟಿ.ಮಂಜುನಾಥ್ ಹಾಜರಿದ್ದರು
ಇದನ್ನು ಓದಿ: ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆ