Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಚುನಾವಣೆ ಸಂದರ್ಭದಲ್ಲಿ ವಶವಾದ ಹಣ ಬಿಡುಗಡೆ ಸಮಿತಿ ಸಭೆ

ಕರ್ನಾಟಕ ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿದಳ (FST) ಮತ್ತು ಸ್ಥಾಯಿ ಕಣ್ಗಾವಲು ತಂಡ(SST), ಪೊಲೀಸ್ ತಂಡದವರು ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗದೆ ಇರುವ ಬಗ್ಗೆ ಸಂಬಂಧಿಸಿದವರಿಂದ ದಾಖಲಾತಿಗಳನ್ನು ಪಡೆದು ಪರಿಶೀಲಿಸಿ ಖಾತ್ರಿಪಡಿಸಿಕೊಂಡ ನಂತರ ಸಂಬಂಧಿಸಿದ ವ್ಯಕ್ತಿಗಳಿಗೆ ಹಣವನ್ನು ಬಿಡುಗಡೆಗೊಳಿಸಲಾಗುವುದು ಎಂದು ಮಂಡ್ಯ ಜಿ.ಪಂ. ಸಿಇಓ ಮತ್ತು ಹಣ ಬಿಡುಗಡೆ ಸಮಿತಿಯ ಅಧ್ಯಕ್ಷ ಶೇಕ್ ತನ್ವೀರ್ ಆಸಿಫ್ ತಿಳಿಸಿದರು.

ಇಂದು‌ ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಣ ಬಿಡುಗಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಿತಿಯ ಮುಂದೆ ಒಟ್ಟು 7 ಪ್ರಕರಣಗಳಿದ್ದು, ಈಗಾಗಲೇ 3 ಪ್ರಕರಣಗಳಿಗೆ ಆದೇಶ ಹೊರಡಿಸಲಾಗಿದೆ ಎಂದರು.

ಇಂದು ಮೇ 3 ರಂದು 4 ಪ್ರಕರಣಗಳಿಗೆ ಸಂಬಂಧಿಸಿದಂತೆ ಹಣ ವಶಪಡಿಸಿಕೊಂಡಿರುವ ವ್ಯಕ್ತಿಗಳಿಗೆ ನೋಟೀಸ್ ಜಾರಿ ಮಾಡಿ ಹಣಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಸಲ್ಲಿಸಲು ತಿಳಿಸಲಾಗಿತ್ತು. ಅವರು ಸಲ್ಲಿಸುವ ದಾಖಲಾತಿಗಳನ್ನು ಪರಿಶೀಲಿಸಿ ಆದೇಶ ಹೊರಡಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಚಂದ್ರಶೇಖರ್. ಜಿಲ್ಲಾ ಖಜಾನಾಧಿಕಾರಿ‌ ಸಿದ್ದಲಿಂಗಸ್ವಾಮಿ‌ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!