Wednesday, November 18, 2026

ಪ್ರಾಯೋಗಿಕ ಆವೃತ್ತಿ

ಚುನಾವಣೆ ಸಂದರ್ಭ ಅಕ್ರಮ ಹಣ ವಶ | ಮೇ 11ಕ್ಕೆ ಹಣ ಬಿಡುಗಡೆ ಸಮಿತಿ ಸಭೆ

ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿ ದಳ ಮತ್ತು ಸ್ಥಾಯಿ ಕಣ್ಗಾವಲು ತಂಡದವರು ತಪಾಸಣೆ  ನಡೆಸಿ ವಶಪಡಿಸಿಕೊಂಡಿರುವ ಹಣವನ್ನು ಮಂಡ್ಯ ಜಿಲ್ಲೆಯ ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ, ತಾಲ್ಲೂಕು ಉಪ-ಖಜಾನೆಯಲ್ಲಿ ಇಡಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಹಣ ಬಿಡುಗಡೆ ಸಮಿತಿಯನ್ನು ರಚಿಸಿದ್ದಾರೆ. ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅವರನ್ನು ಹಣ ಬಿಡುಗಡೆ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಅವರ ಅಧ್ಯಕ್ಷತೆಯಲ್ಲಿ ಮೇ 11 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಹಣ ಬಿಡುಗಡೆ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾ ವೆಚ್ಚ ಉಸ್ತುವಾರಿ ಕೋಶದ ಹಣ ಬಿಡುಗಡೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಣವು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗದೇ ಇರುವ ಬಗ್ಗೆ ಸಂಬಂಧಿಸಿದವರಿಂದ ದಾಖಾಲಾತಿಗಳನ್ನು ಪಡೆದು ಪರಿಶೀಲಿಸಿ, ಖಾತ್ರಿ ಪಡಿಸಿಕೊಂಡ ನಂತರ ಸಂಬಂಧಿಸಿದ ವ್ಯಕ್ತಿಗಳಿಗೆ ಹಣವನ್ನು ಬಿಡುಗಡೆಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಚ್.ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ