Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೊಡಗು| ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿದವನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ಪೇಟೆಯಲ್ಲಿ ಮೀನಾ ಎಂಬ ಅಪ್ರಾಪ್ತ ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಮೊಣ್ಣಂಡ ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೀನಾಳನ್ನು ಕೊಂದ ಪ್ರಕಾಶ್ ತನ್ನ ಮನೆಯ ಸಮೀಪದಲ್ಲೇ ನೇಣಿಗೆ ಶರಣಾಗಿದ್ದಾನೆ. ಆದರೆ ಆತ ತೆಗೆದುಕೊಂಡು ಹೋಗಿದ್ದ ಬಾಲಕಿ ರುಂಡ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕಾಶ್ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮುಟ್ಲು ಗ್ರಾಮದಲ್ಲಿ ವಿದ್ಯಾರ್ಥಿನಿಯೋರ್ವಳ ರುಂಡ ಮುಂಡ ಬೇರ್ಪಡಿಸಿ ಕೊಂದು ಹಾಕಿದ ಘಟನೆ ಇಡೀ ಕೊಡಗು ಜಿಲ್ಲೆಯನ್ನು ತಲ್ಲಣಗೊಳಿಸಿತ್ತು.

ಹಮ್ಮಿಯಾಲ ಗ್ರಾಮದ ಮೊಣ್ಣಂಡ ಪ್ರಕಾಶ್ ಎಂಬಾತ ವಿದ್ಯಾರ್ಥಿನಿಯ ಕತ್ತು ಕತ್ತರಿಸಿ ಕೊಲೆಗೈದು, ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ.

ವಿದ್ಯಾರ್ಥಿನಿಯ ನಿಶ್ಚಿತಾರ್ಥ ಇತ್ತೀಚಿಗೆ ನಿಶ್ಚಯವಾಗಿದ್ದು. ಆಕೆ ಅಪ್ರಾಪ್ತ ಬಾಲಕಿ ಎಂಬ ಕಾರಣಕ್ಕೆ ಪೊಲೀಸರು ಮಧ್ಯಪ್ರವೇಶಿಸಿ ನಿಶ್ಚಿತಾರ್ಥ ರದ್ದುಗೊಳಿಸಿದ್ದರು.
ಮದುವೆ ರದ್ದಾಗಿದ್ದರಿಂದ ಸಿಟ್ಟಿಗೆದ್ದ ಕ್ರೂರಿ ಪ್ರಕಾಶ್ ಆಕೆಯನ್ನು ಭೀಕರವಾಗಿ ಹತ್ಯೆಗೈದಿದ್ದಾನೆ. ಸೂರ್ಲಬ್ಬಿಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ SSLC ಯಲ್ಲಿ ಈಗಷ್ಟೇ ಪಾಸಾಗಿದ್ದಳು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ