ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು RSS ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ, ಅವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ ಎಂದು ವ್ಯಂಗ್ಯವಾಡಿದೆ.
ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು RSS ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ, ಅವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ!
ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು…
— Karnataka Congress (@INCKarnataka) December 11, 2023
“>
ಬಿಜೆಪಿಯಲ್ಲಿ ಸಮನ್ವಯತೆಯ ಕೊರತೆ ಇದೆ ಎನ್ನುವುದನ್ನು ಸ್ವತಃ ಬಿಜೆಪಿ ನಾಯಕರೇ ಒಪ್ಪಿಕೊಂಡಿದ್ದಾರೆ. ಅಸಲಿಗೆ ಇದು ಸಮನ್ವಯತೆಯ ಕೊರತೆಯಲ್ಲ, ಅಂತರ್ಯುದ್ಧದ ಪ್ರಭಾವ! ಬಿಜೆಪಿಯಲ್ಲಿ ಹಲವರಿಗೆ ಆರ್.ಅಶೋಕ್ ಅವರನ್ನು ಒಪ್ಪಿಕೊಳ್ಳಲಾಗುತ್ತಿಲ್ಲ, ಇನ್ನೂ ಹಲವರಿಗೆ ವಿಜಯೇಂದ್ರ ಅವರನ್ನು ಸಹಿಸಲಾಗುತ್ತಿಲ್ಲ. ಇಷ್ಟು ದಿನ ವಿರೋಧ ಪಕ್ಷದ ನಾಯಕನಿರಲಿಲ್ಲ, ಈಗ ವಿರೋಧ ಪಕ್ಷದ ನಾಯಕನಿಗೆ ಬೆಂಬಲವೇ ಇಲ್ಲ. ಒಟ್ಟಿನಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ! ಎಂದು ಕಾಂಗ್ರೆಸ್ ಮೂದಲಿಸಿದೆ.




