Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣದ ಬಳಿ ಬೆಂ-ಮೈ ಹೆದ್ದಾರಿ ಬಂದ್: 150ಕ್ಕೂ ಹೆಚ್ಚು ರೈತರ ಬಂಧನ

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಯದಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೌರಿಪುರದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಬಂದ್ ಮಾಡಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ಜಿಲ್ಲಾಧ್ಯಕ್ಷ ಕೆಂಪೂಗೌಡ ಅವರ ನೇತೃತ್ವದಲ್ಲಿ ಹೆದ್ದಾರಿಗಿಳಿದ ನೂರಾರು ರೈತರು ಗಂಟೆಗಳ ಕಾಲ ಹೆದ್ದಾರಿ ತಡೆ ನಡೆಸಿ, ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಹೆದ್ಧಾರಿ ತಡೆಯಿಂದಾಗಿ ಹೆದ್ಧಾರಿಯ ವಾಹನ ಸವಾರರು ಪರದಾಡುವಂತಾಯಿತು, ನಂತರ 150 ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿ, ಶ್ರೀರಂಗಪಟ್ಟಣದ ರಂಗನಾಥ ಕಲ್ಯಾಣ ಮಂಟಪಕ್ಕೆ ಕರೆತಂದರು, ಹೆದ್ದಾರಿ ತಡೆ ಮಾಡಿದ ಹಲವು ರೈತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಬಂಧಿಸಿದ ರೈತರಿಗೆ ಕಲ್ಯಾಣ ಮಂಟಪದ ಬಳಿಯೇ ಊಟದ ವ್ಯವಸ್ಥೆ ಕಲ್ಪಿಸಿದ್ದರು.

ಶ್ರೀರಂಗಪಟ್ಟಣದಲ್ಲಿ 2 ಸಾವಿರ ಜನರಿಂದ ಪ್ರತಿಭಟನೆ

ಶ್ರೀರಂಗಪಟ್ಟಣದಲ್ಲಿ ತಾಲ್ಲೂಕು ರೈತ ಹಿತರಕ್ಷಣಾ ಸಮಿತಿ, ಕಸಾಪ, ದಲಿತ ಸಂಘಟನೆಗಳು ಸೇರಿದಂತೆ ಒಟ್ಟು 50ಕ್ಕೂ ಹೆಚ್ಚು ಸಂಘಟನೆಗಳ ನೇತೃತ್ವದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಜನ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣದ ಕುವೆಂಪು ರಸ್ತೆಯಲ್ಲಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿ, ಘೋಷಣೆಗಳನ್ನು ಕೂಗಿದರು. ನಂತರ ತಾಲ್ಲೂಕು ಕಚೇರಿ ಬಳಿಗೆ ತೆರಳಿ 2 ಗಂಟೆಗೂ ಹೆಚ್ಚು ಕಾಲ ಮುತ್ತಿಗೆ ಹಾಕಿದರು.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ  ಅಭೂತಪೂರ್ವವಾಗಿ ಬೆಂಬಲ ವ್ಯಕ್ತಪಡಿಸಿದರು. ಸ್ವಯಂ ಪ್ರೇರಿತರಾಗಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!