ಮಂಡ್ಯ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ತಾಯಿ ಹಾಲಿನ ಬ್ಯಾಂಕ್ ಮತ್ತು MLCU ನಿರ್ಮಾಣ ಕಾಮಗಾರಿಯನ್ನು ಜನವರಿ 2026ರ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳಿಗೆ ಸೂಚಿಸಿದರು.
ಮಂಗಳವಾರ ಮಂಡ್ಯ ಜಿ.ಪಂ.ನ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ವಿವಿಧ ಕಾರ್ಯಕ್ರಮಗಳಡಿ ನಿಯಮಾನುಸಾರ ಅನುದಾನ ನಿಗಧಿ ಮಾಡಿದ್ದು, ಸದರಿ ಅನುದಾನದ ಪೈಕಿ ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗಾಗಿ ನಿಗಧಿಪಡಿಸಿರುವ ಅನುದಾನಕ್ಕೆ ಅನುಗುಣವಾಗಿ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಿದರು.
ತಾಯಿ ಹಾಲಿನ ಬ್ಯಾಂಕ್ ಸ್ಥಾಪಿಸಲು ಅಗತ್ಯವಿರುವ ಯಂತ್ರೋಪಕರಣಗಳ ಪೈಕಿ ಕೆಲವು ಯಂತ್ರೋಪಕರಣಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಒದಗಿಸುವುದಾಗಿ ತಿಳಿಸಿದ್ದು, ಉಳಿಕೆ ಯಂತ್ರೋಪಕರಣಗಳನ್ನು ಟೆಂಡರ್ ಮೂಲಕ ಖರೀದಿಸಲು ನಿಯಮಾನುಸಾರ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಕಾಮಗಾರಿಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ ಪ್ರಾರಂಭಿಸಿ ಪೂರ್ಣಗೊಳಿಸಲು ಸೂಕ್ತ ಕ್ರಮವಹಿಸಬೇಕು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದಂತೆ ನಿರ್ವಹಿಸಬೇಕು ಹಾಗೂ ಈ ಬಗ್ಗೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧಿಕಾರಿಗಳು ಮತ್ತು ಡಿಹೆಚ್ಒ ಕಚೇರಿಯ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಿದರು.
ಮಾರ್ಚ್ 8ರ ಮಹಿಳಾ ದಿನಾಚರಣೆಯಂದು ಉದ್ಘಾಟನೆ ಮಾಡಲು ಕ್ರಮ
ತಾಯಿ ಹಾಲಿನ ಬ್ಯಾಂಕ್ ಮತ್ತು MLCU ಘಟಕವನ್ನು ಮಾರ್ಚ್ 8ರ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಉದ್ಘಾಟಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಯಿ ಹಾಲಿನ ಬ್ಯಾಂಕ್ ಮತ್ತು MLCU ಘಟಕವನ್ನು ಮಾರ್ಚ್ 8ರ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಉದ್ಘಾಟಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಸ್ತ್ರಿಕಾ ಫೌಂಡೇಷನ್ ನಿಂದ ತಾಂತ್ರಿಕ ಸಹಕಾರ: ತಾಯಿ ಹಾಲಿನ ಬ್ಯಾಂಕ್ ಮತ್ತು MLCU ನಿರ್ಮಾಣಕ್ಕೆ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಅಸ್ತ್ರಿಕಾ ಫೌಂಡೇಷನ್ ತಾಂತ್ರಿಕ ಸಲಹೆ ಮತ್ತು ಸಹಕಾರ ನೀಡಲಿದೆ ಎಂದು ತಿಳಿಸಿದರು.
ಫಲ ಪುಷ್ಪ ಪ್ರದರ್ಶನದಲ್ಲಿ ಮಳಗೆ ತೆರೆದು ತಾಯಿ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸಲು ಸೂಚನೆ: ತೋಟಗಾರಿಕಾ ಇಲಾಖೆ ವತಿಯಿಂದ ಆಯೋಜಿಸಲಾಗುವ ಫಲ ಪುಷ್ಪ ಪ್ರದರ್ಶನದಲ್ಲಿ ಮಾಹಿತಿ ಮಳಿಗೆ ತೆರೆದು ತಾಯಿ ಹಾಲಿನ ಮಹತ್ವ ಹಾಗೂ ತಾಯಿ ಹಾಲಿನ ಬ್ಯಾಂಕ್ ಕಾರ್ಯನಿರ್ವಹಣೆಯ ಕುರಿತು ಅರಿವು ಮೂಡಿಸುವಂತೆ ಸೂಚಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಸಹಾಯಕ ಕಾರ್ಯದರ್ಶಿ ಚಂದ್ರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ. ಅಶ್ವತ್, ಗರ್ಭಿಣಿ ಮತ್ತು ಪ್ರಸೂತಿ ತಜ್ಞ ಡಾ. ಮನೋಹರ್, ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞ ಡಾ. ಕೀರ್ತಿ ಸೇರಿದಂತೆ ಇತರರು ಹಾಜರಿದ್ದರು.




