Thursday, September 19, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿ- ಸಂಸದೆ ಸುಮಲತಾ

ಗ್ರಾಮೀಣ ಪ್ರದೇಶದ ಗ್ರಾಮಗಳ ಅಭಿವೃದ್ದಿಗೆ ಸರ್ಕಾರದ ವತಿಯಿಂದ ನೀಡುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಪ್ರಾಮಾಣಿಕತೆಯಿಂದ ಮಾಡಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳವಳ್ಳಿ ತಾಲ್ಲೂಕಿನ ನಾಗೇಗೌಡನದೊಡ್ಡಿ ಗ್ರಾಮದಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಗ್ರಾಮಗಳ ಅಭಿವೃದ್ದಿಗೆ ಸರ್ಕಾರದ ವತಿಯಿಂದ ನೀಡುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮವಹಿಸಿದರೇ ಗ್ರಾಮಗಳು ಅಭಿವೃದ್ದಿಹೊಂದಲು ಸಾಧ್ಯವಾಗುತ್ತದೆ, ಗ್ರಾಮಗಳ ಅಭಿವೃದ್ದಿಗೆ ಅಧಿಕಾರಿಗಳು ಹೆಚ್ಚಿನ ಆಧ್ಯತೆ ನೀಡಿ ಮೂಲಭೂತ ಸೌಲಭ್ಯಗಳನ್ನು ನೀಡಬೇಕೆಂದು ಹೇಳಿದರು.

ಅಭಿವೃದ್ದಿ ಕಾರ್ಯಕ್ರಮಗಳಿಗೆ ಸರ್ಕಾರ, ಜನಪ್ರತಿನಿಧಿಗಳ ಜೊತೆಗೆ ಸಾರ್ವಜನಿಕರು ಕೈಜೊಡಿಸುವುದರ ಮೂಲಕ ಸಲಹೆ ಸೂಚನೆಗಳನ್ನು ನೀಡಬೇಕು, ಕಳಪೆ ಕಾಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು, ಗ್ರಾಮಗಳಲ್ಲಿ ಇರುವ ಸಮಸ್ಯೆಗಳ ಬಗ್ಗೆ ಲಿಖಿತವಾಗಿ ಅಥವಾ ಮೌಖಿಕವಾಗಿ ತಮ್ಮ ಗಮನಕ್ಕೆ ತಂದರೆ ಸಮಸ್ಯೆ ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು, ಗ್ರಾಮಗಳ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅವರ ಹತ್ತಿರವೇ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದರು.

ಶಾಸಕ ಪಿ.ಎಂ ನರೇಂದ್ರಸ್ವಾಮಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಮತ ಕೊಟ್ಟಿದ ವಿಶೇಷ ನೆನೆಪಿನಲ್ಲಿ ತಾಲ್ಲೂಕಿನ ಕೆಲವು ಗ್ರಾಮಗಳನ್ನು ಆದರ್ಶ ಗ್ರಾಮವನ್ನಾಗಿ ಮಾಡುತ್ತಿದ್ದಾರೆ. ಇಂದು ಪೋಟೋದಲ್ಲಿ ಕಾಣಿಸಿಕೊಂಡಿರುವವರು ವೋಟು ಹಾಕಿಸುವಾಗ ಕಂಡಿರಲ್ಲಿಲ್ಲ, ಮುಂದಿನ ದಿನಗಳಲ್ಲಾದರೂ ನಿಮಗೆ ವೋಟು ಹಾಕಿಸಲಿ ಎಂದು ಬಿಜೆಪಿ ಮುಖಂಡರಿಗೆ ಟಾಂಗ್ ನೀಡಿದರು.
ಬರದ ನಡುವೆಯೂ ನೆಮ್ಮದಿಯಿಂದ ಬದುಕಲು ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳು ಸಹಕಾರಿಯಾಗಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದಾರೆಂದು ತಿಳಿಸಿದರು.

ಬರದ ನಡುವೆ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿಲ್ಲದಿದ್ದರೂ ಜನ ಜಾನುವಾರುಗಳಿಗೆ ಸಮರ್ಪಕ ನೀರು ಸಿಗುವಂತೆ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಶ್ರಮಿಸಲಾಗುವುದು, ಹನಿ ನೀರಾವರಿ ಯೋಜನೆ ಸದ್ಯದಲ್ಲಿಯೇ ಚಾಲನೆ ನೀಡಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವಮ್ಮ ಉಪಾಧ್ಯಕ್ಷ ಭಾಗಮ್ಮ .ಸದಸ್ಯ ಶಿವಲಿಂಗೇಗೌಡ. ಪುರಸಭೆ ಸದಸ್ಯ ಪುಟ್ಟಸ್ವಾಮಿ ಮುಖಂಡರಾದ ಬಂಕ್ ಮಹಾದೇವ. ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!