Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುತ್ತಾರೆಯೇ?!

ಸ್ವಾಭಿಮಾನಿ ಸಂಸದೆ ಎಂದೇ ಹೆಸರುವಾಸಿಯಾಗಿದ್ದ ಸಂಸದೆ ಸುಮಲತಾ ಫೋಟೋ ಬಿಜೆಪಿಯ ಫ್ಲೆಕ್ಸ್‌ನಲ್ಲಿ ಕಾಣಿಸಿಕೊಂಡಿದ್ದು, ಸುಮಲತಾ ಬಿಜೆಪಿ ಸೇರ್ಪಡೆಯಾಗುತ್ತಾರೆಯೇ ಎಂಬ ಅನುಮಾನಕ್ಕೆ ಎಡೆಮಾಡಿದೆ.

ಡಿಸೆಂಬರ್‍‌ 30ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್‌ ಶಾ ಅವರನ್ನು ಜಿಲ್ಲೆಗೆ ಸ್ವಾಗತಿಸಿ ಬಿಜೆಪಿಯ ಅನೇಕರು ಫ್ಲೆಕ್ಸ್‌ಗಳನ್ನು ಹಾಕಿದ್ದಾರೆ.

ಅಮಿತ್‌ ಶಾ ಆಗಮನಕ್ಕೆ ಶುಭ ಕೋರಿ ಸಂಸದೆ ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದ ಅವರು ಫ್ಲೆಕ್ಸ್‌ ಹಾಕಿದ್ದು, ಅವರು ಹಾಕಿರುವ ಫ್ಲೆಕ್ಸ್‌ನಲ್ಲಿ ಸುಮಲತಾ ಫೋಟೋ ಕೂಡ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫ್ಲೆಕ್ಸ್‌ನ ಫೋಟೋಗಳು ಹರಿದಾಡುತ್ತಿದ್ದು, ಸುಮಲತಾ ಬಿಜೆಪಿ ಸೇರುತ್ತಾರೆಯೇ ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ಬಿಜೆಪಿ ಫ್ಲೆಕ್ಸ್‌ನಲ್ಲಿ ಸುಮಲತಾ ಫೋಟೋ ಸಂಬಂಧ ಚಾಮರಾಜನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂಸದ ನಳಿನ್‌ಕುಮಾರ್‍‌ ಕಟೀಲ್, ”ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿ ಫ್ಲೆಕ್ಸ್‌ನಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿರಬಹುದು ಅಷ್ಟೇ” ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!