Monday, May 6, 2024

ಪ್ರಾಯೋಗಿಕ ಆವೃತ್ತಿ

ಮೌಢ್ಯ ಹೋಗಲಾಡಿಸಲು ಕನಕದಾಸರ ಪಾತ್ರ ಅಪಾರ : ಜಿಲ್ಲಾಧಿಕಾರಿ

ಸಮಾಜದಲ್ಲಿ ತಾಂಡವವಾಡುತ್ತಿದ್ದ ಮೌಢ್ಯವನ್ನು ಹೋಗಲಾಡಿಸಿ ಸಮ-ಸಮಾಜ ನಿರ್ಮಾಣ ಮಾಡುವಲ್ಲಿ ಕನಕದಾಸರ ಪಾತ್ರ ಅಪಾರ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಾರ್ವಜನಿಕರಿಗೆ ಸದಾ ಮೌಲ್ಯಗಳ ಬಗ್ಗೆ ತಿಳಿಸುತ್ತಿದ್ದರು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲ ಕೃಷ್ಣ ತಿಳಿಸಿದರು.

ಮಂಡ್ಯ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಮಾಜದ ಮಹಾನ್ ಪುರುಷರನ್ನು ನಾವು ಸದಾ‌ ನೆನೆಯಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರ ಪುಣ್ಯ ಪುರುಷರ ಜಯಂತಿಗಳನ್ನು ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟಿದೆ, ಜೊತೆಗೆ ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಒಂದೇ ಎಂದೂ ಜಯಂತಿಗಳನ್ನ ಆಚರಣೆ ಮಾಡುತ್ತ ಬಂದಿದೆ ಎಂದರು.

ಕನಕದಾಸರು ನಾಡಿಗೆ, ಸಂಸ್ಕೃತಿಗೆ ಹಾಗೂ ಸಮಾಜಕ್ಕೆ ಮೌಲ್ಯಯುತ ಕೊಡುಗೆಯನ್ನು ಬಿಟ್ಟು ಹೋಗಿದ್ದಾರೆ. ಅಂತಹ ಮಹಾನ್ ವ್ಯಕ್ತಿಯನ್ನು ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಕನಕದಾಸರು 15ನೇ ಶತಮಾನದಲ್ಲಿಯೇ ಜಾತಿ-ಬೇಧ, ವರ್ಣಬೇಧ ಮೂಡನಂಬಿಕೆಗಳನ್ನು ವಿರೋಧಿಸುತ್ತಿದ್ದರು. ಸಾಮಾನ್ಯ ನಾಗರೀಕರಿಗೂ ಸರಳವಾಗಿ ಅರ್ಥವಾಗುವಂತೆ ತಮ್ಮ ಕೀರ್ತನೆಗಳ ಮೂಲಕ ಮೌಲ್ಯಾಧಾರಿತ ವಿಚಾರಗಳನ್ನು ಸಾರಿದರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಮೀನಾಕ್ಷಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಪುಟ್ಟಬಸವಯ್ಯ, ಮಾಜಿ ಸಚಿವ ಎಂ.ಎಸ್ ಆತ್ಮಾನಂದ, ಜಿಲ್ಲಾ
ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಉದಯ್ ಕುಮಾರ್, ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಜಿಲ್ಲಾ ಹಿಂದುಳಿದ‌ ವರ್ಗಗಳ ಇಲಾಖೆ ಅಧಿಕಾರಿ ಶ್ರೀನಿವಾಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜವರೇಗೌಡ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!