Wednesday, June 12, 2024

ಪ್ರಾಯೋಗಿಕ ಆವೃತ್ತಿ

ಸಿದ್ದರಾಮಯ್ಯನವರ ನಿರ್ಗಮನಕ್ಕೆ ಮುಹೂರ್ತ ಫಿಕ್ಸ್?

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಮ್ಮ ಕುರ್ಚಿ ತ್ಯಜಿಸುವ ಸ್ಪಷ್ಟವಾದ ಲಕ್ಷಣಗಳು ಗೋಚರಿಸುತ್ತಿವೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ‌ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತವಾಗಿದ್ದು, ಆ ಸ್ಥಾನಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ತರುವುದು.ಹಾಗೆಯೇ ತಮ್ಮ ಮಗ ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡುವುದರ ಮೂಲಕ ತಾವು ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಮುನ್ಸೂಚನೆ ನೀಡುತ್ತಿದ್ದಾರೆ ಎಂದೇ ರಾಜಕೀಯ ಪಡಸಾಲೆಗಳಲ್ಲಿ ಚರ್ಚಿಸಲಾಗುತ್ತಿದೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ‌ ಸಿದ್ದರಾಮಯ್ಯನವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಕೋಲಾರದಿಂದ ಸ್ಪರ್ಧಿಸಲು ಬಯಸಿದ್ದೆ. ಈ ಸಂದರ್ಭದಲ್ಲಿ ಹೈ ಕಮಾಂಡ್ ನಾಯಕರು ಯತೀಂದ್ರನಿಗೆ ನಿಮ್ಮ ತಂದೆಗಾಗಿ ವರುಣಾ ಕ್ಷೇತ್ರವನ್ನು ಬಿಟ್ಟು ಕೊಡಬೇಕು.ಮುಂದೆ ನಿಮ್ಮನ್ನು ವಿಧಾನ ಪರಿಷತ್ ಸದಸ್ಯ ಮಾಡುವುದಾಗಿ ಭರವಸೆ ನೀಡಿದ್ದರು.ಅದರಂತೆ ಯತೀಂದ್ರ ವರುಣಾ ಕ್ಷೇತ್ರ ಬಿಟ್ಟು ಕೊಟ್ಟಿದ್ದು, ಆತನಿಗೆ ಎಂ ಎಲ್ ಸಿ ಸ್ಥಾನ ಕೊಡುವುದನ್ನು ಕಾದು ನೋಡಬೇಕು ಎಂದಿದ್ದಾರೆ.

ಮೂರು ದಿನಗಳ ಹಿಂದಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಲೋಕಸಭಾ ಚುನಾವಣೆಯ ನಂತರ ಹುದ್ದೆ ತ್ಯಜಿಸುವುದಾಗಿ ಹೇಳಿದ್ದರು.ಈಗ ಸಿಎಂ ಕೂಡ ತಮ್ಮ ಪುತ್ರ ಯತೀಂದ್ರನಿಗೆ ಎಂಎಲ್ಸಿ ಸ್ಥಾನ ನೀಡಲಿದೆ ಎಂದು ಹೇಳಿರುವುದು.ಇದನ್ಮೆಲ್ಲ ನೋಡಿದರೆ ಸಿಎಂ ಸಿದ್ದರಾಮಯ್ಯ ಅವರು ಕುರ್ಚಿ ತ್ಯಜಿಸುವ ಕಾಲ ಸನ್ನಿಹಿತವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ‌.ಇದಕ್ಕೆ ಕಾಲವೇ ಉತ್ತರಿಸಬೇಕಿದ್ದು,ಅಲ್ಲಿವರೆಗೂ ಕಾದು ನೋಡಬೇಕಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!