Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮುಜರಾಯಿ ದೇವಾಲಯಗಳ ಜೀರ್ಣೋದ್ದಾರಕ್ಕೆ ಆಗ್ರಹ

ನಾಗಮಂಗಲ ತಾಲ್ಲೂಕಿನಲ್ಲಿ ಮುಜರಾಯಿ ಇಲಾಖೆಗೆ ಒಳಪಟ್ಟಿರುವ ದೇವಾಲಯಗಳನ್ನು ಶೀಘ್ರವಾಗಿ ಜೀರ್ಣೋದ್ಧಾರ ಮಾಡುವಂತೆ ತಾಲ್ಲೂಕು ಮುಜರಾಯಿ ಇಲಾಖೆ ಅರ್ಚಕರ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್.ರಂಗಸ್ವಾಮಿ ಒತ್ತಾಯಿಸಿದರು.

ನಾಗಮಂಗಲದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಸುಮಾರು ನೂರು ದೇವಾಲಯಗಳು ಜೀರ್ಣೋದ್ಧಾರ ಆಗಬೇಕಾಗಿದ್ದು, 15 ದೇವಾಲಯಗಳು ಬಿದ್ದುಹೋಗಿದ್ದು ಈ ದೇವಾಲಯಗಳು ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ಶೀಘ್ರವಾಗಿ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದರು.

ನಾಗಮಂಗಲ ತಾಲ್ಲೂಕಿನ 530 ದೇವಾಲಯಗಳಿದ್ದು ಮುಜರಾಯಿ ದೇವಾಲಯಗಳು ಇರುವ ಸ್ಥಳಕ್ಕೆ ಭೇಟಿ ಕೊಟ್ಟು ದೇವಾಲಯ ಸ್ಥಿತಿಗತಿಗಳನ್ನು ಗಮನಿಸಿ ಪಟ್ಟಿ ಮಾಡಿ, ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸಚಿವರಿಗೆ ದೂರು ನೀಡಲಾಗುವುದು ಎಂದರು.

ಮುಜರಾಯಿ ಇಲಾಖೆಯ ದೇವಾಲಯಗಳಿಗೆ ದೇವರ ಪೂಜೆಗೆ ಮಾಸಿಕ ಸಂಭಾವನೆ ಕಡಿಮೆ ಇದ್ದು, ಸಂಭಾವನೆ ಹೆಚ್ಚಿಸಲು ಅಗ್ರಹಿಸಿದರು.

ಇದೇ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಡಿ.ಕೆ.ಶ್ರೀನಿವಾಸ್ ಮೂರ್ತಿ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ