Thursday, September 19, 2024

ಪ್ರಾಯೋಗಿಕ ಆವೃತ್ತಿ

ಚಿಕ್ಕಮಗಳೂರು| ಮುಳ್ಳಯ್ಯನಗಿರಿ, ದತ್ತಪೀಠ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗಳಿಗೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಶ್ರೀರಾಮ ಸೇನೆ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು, ಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಈ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ನ.4 ಬೆಳಗ್ಗೆ 6 ರಿಂದ ನ.6ರ ಬೆಳಗ್ಗೆ 10 ರವರೆಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ಈ ಸಮಯದಲ್ಲಿ ಪ್ರವಾಸಿಗರು ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಆಲೋಚನೆಯಲ್ಲಿದ್ದರೆ, ದಿನಾಂಕವನ್ನು ಬದಲಾಯಿಸಿಕೊಳ್ಳಿ ಎಂದು ಜಿಲ್ಲಾಡಳಿತ ಹೇಳಿದೆ.

ದತ್ತಮಾಲಾ ಅಭಿಯಾನ ನಡೆಯುವ ಸಮಯದಲ್ಲಿ ಹೆಚ್ಚಿನ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆ, ಪ್ರವಾಸಿಗರಿಗೆ ಅನಾನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಹಾಗಾಗಿ, ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ, ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ನವೆಂಬರ್ 4 ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

“ಅ.30 ರಂದು ರಾಜ್ಯಾದ್ಯಂತ ದತ್ತ ಭಕ್ತರು ದತ್ತಮಾಲೆ ಧರಿಸಲಿದ್ದಾರೆ. ಅದೇ ದಿನ ಚಿಕ್ಕಮಗಳೂರಿನ ಶಂಕರಮಠದ ಮಾಲಾಧಾರಣೆ ನಡೆಯಲಿದೆ. ನ.2 ರಂದು ದತ್ತ ದೀಪೋತ್ಸವ, ನ.4 ರಂದು ಪಡಿ ಸಂಗ್ರಹ ಮಾಡಲಾಗುವುದು. ನ.5 ರಂದು ಶೋಭಾಯಾತ್ರೆ ನಡೆಯಲಿದೆ. ಇದೇ ಸ್ಥಳದಲ್ಲಿ ಧರ್ಮಸಭೆ ನಡೆಸಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದ ನಂತರ ಹೋಮ ಹವನ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ” ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!