Friday, September 20, 2024

ಪ್ರಾಯೋಗಿಕ ಆವೃತ್ತಿ

ಪೌತಿ ಖಾತೆಗಾಗಿ ಲಂಚ| ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ನಿವೇಶನವನ್ನು ಪೌತಿ ಖಾತೆ ಮಾಡಿಕೊಡಲು ವ್ಯಕ್ತಿಯಿಂದ ಲಂಚ ಪಡೆಯುತ್ತಿದ್ದ ಪುರಸಭೆ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ ಅಧಿಕಾರಿ ಗಿರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಡ್ಯ ಚಾಮುಂಡೇಶ್ವರಿ ನಗರದಲ್ಲಿ ವಾಸವಿದ್ದ ಪ್ರಶಾಂತ್ ಅವರಿಗೆ ಸೇರಿದ್ದ ಗಂಜಾಂನಲ್ಲಿ ತಾಯಿ ಹೆಸರಿನಲ್ಲಿ ಜಂಟಿ ಖಾತೆಯಲ್ಲಿದ್ದ ನಿವೇಶವನ್ನು ತಾಯಿ ಮರಣ ನಂತರ ತನ್ನ ಪೌತಿ ಖಾತೆ ಮಾಡಿಕೊಡಲು ಅಕ್ಟೋಬರ್ ತಿಂಗಳಲ್ಲಿ ಪುರಸಭೆಗೆ ಮನವಿ ಮಾಡಿದ್ದರು. ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿ ಗಿರೀಶ್ ಹಾಗೂ ಮುಖ್ಯಾಧಿಕಾರಿ ರಾಣಿ 1 ಲಕ್ಷದ 80 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಪ್ರಶಾಂತ್ ಈ ಸಂಬಂಧ ಲೋಕಾಯುಕ್ತರಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಲೋಕಾಯುಕ್ತ ಎಸ್‌ಪಿ ವಿ.ಜೆ.ಸುಜಿತ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುನೀಲ್‌ಕುಮಾರ್, ಇನ್ಸ್‌ಪೆಕ್ಟರ್ ಮೋಹನ್ ರೆಡ್ಡಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಶನಿವಾರ ಮಧ್ಯಾಹ್ನ ಕಚೇರಿಯಲ್ಲಿ ಪುರಸಭೆ ಮುಖ್ಯಾಧಿಕಾರಿ 1 ಲಕ್ಷ ರು. ಮುಂಗಡ ಹಣ ಪಡೆಯುತ್ತಿದ್ದ ವೇಳೆ ಹಣ ಸಹಿತ ಗಿರೀಶ್ ಹಾಗೂ ರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳ ವಶಕ್ಕೆ ಪಡೆದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!