Thursday, September 19, 2024

ಪ್ರಾಯೋಗಿಕ ಆವೃತ್ತಿ

ಪುರಸಭೆ ಸದಸ್ಯನಾಗಿ ರೌಡಿಶೀಟರ್‌ ನಾಮನಿರ್ದೇಶನ

ಬಿಜೆಪಿಗೆ ರೌಡಿಶೀಟರ್‌ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡಿದ್ದು ಮತ್ರು ಸೇರ್ಪಡೆಯಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ರಾಜಕೀಯ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಪುರಸಭೆಗೆ ನಾಮನಿರ್ದೇಶಿತ ಸದಸ್ಯನಾಗಿ ರೌಡಿಶೀಟರ್‌ ಮಂಜುನಾಥ್‌ನನ್ನು ಸರ್ಕಾರ ಆಯ್ಕೆ ಮಾಡಿದೆ. ರೌಡಿಶೀಟರ್‌ಗೆ ಮಣೆ ಹಾಕಿರುವ ಬಿಜೆಪಿ ಮತ್ತೊಮ್ಮೆ ಟೀಕೆಗೆ ಗುರಿಯಾಗಿದೆ. 

ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಉಪ್ಪಿ ನಖರಬಾಬು ಮರ್ಡರ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣೆಯ ರೌಡಿಶೀಟರ್‌ ಪಟ್ಟಿಯಲ್ಲಿ ಆತನ ಹೆಸರು ಮತ್ತು ಪೋಟೋಗಳಿವೆ. ಆತನಿಗೆ ಪಕ್ಷದ ಸದಸ್ಯತ್ವ ನೀಡುವುದಕ್ಕೂ ಮುನ್ನವೇ ಪುರಸಭೆ ಸದಸ್ಯತ್ವ ನೀಡಲಾಗಿದೆ.  ಮಂಜುನಾಥ್ ಅಲಿಯಾಸ್ ಉಪ್ಪಿ ಪಕ್ಷಕ್ಕೆ ಸೇರ್ಪಡೆಗೂ ಮುನ್ನವೇ ಅಧಿಕಾರ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ರಾಜ್ಯ ರಾಜಕಾರಣದಲ್ಲಿ ರೌಡಿ ರಾಜಕೀಯಕ್ಕೆ ಬಿಜೆಪಿ ಮತ್ತೆ ಪ್ರಚೋದನೆ ನೀಡುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!