Thursday, November 19, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ ಪತಿ ಪರಾರಿ

ಪತಿಯು ತನ್ನ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹುಲ್ಕೆರೆ ಗ್ರಾಮದಲ್ಲಿ ನಡೆದಿದೆ.

ಹುಲ್ಕೆರೆ ಗ್ರಾಮದ ಗಣೀಶ್ ತನ್ನ ಪತ್ನಿ ಸೌಮ್ಯ(24) ಎಂಬುವರನ್ನೇ ಕೊಲೆಗೈದು ತಲೆಮರೆಸಿಕೊಂಡಿದ್ದಾನೆ.  ಮೂಲತಃ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಅವರನ್ನು ಕಳೆದ 8 ವರ್ಷಗಳ ಹಿಂದೆ ಗಣೇಶ್ (35)ಗೆ ಮದುವೆ ಮಾಡಿಕೊಡಲಾಗಿತ್ತು.

ಈ ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ, ಚಾಕುವಿನಿಂದ ಪತ್ನಿ ಕತ್ತು ಕುಯ್ದು ಪರಾರಿಯಾಗಿರೋ ಪತಿ ಗಣೇಶ್ ಗಣೇಶ್ ನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆ ನಡೆದ ನಂತರ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ